ಬಳ್ಳಾರಿ ಸೆಂಟ್ರಲ್ ಜೈಲಿಗೆ ಟಿಟಿ ವಾಹನದಲ್ಲಿ ನಟ ದರ್ಶನ್ ಶಿಫ್ಟ್
ಬೆಂಗಳೂರು : ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ. ದರ್ಶನ್ ಕಾಣಬಾರದು ಎನ್ನುವ ಕಾರಣಕ್ಕೆ ಬೊಲೆರೋ ಕಾರಿನ ಒಳಗೆ ಕರ್ಟನ್ ಹಾಕಲಾಗಿತ್ತು. ಬಳಿಕ ಬೆಲೊರೊ ವಾಹನದಿಂದ ದರ್ಶನ್ ರನ್ನು ಟಿಟಿ ವಾಹನಕ್ಕೆ ಶಿಫ್ಟ್ ಮಾಡಲಾಗಿತ್ತು. ಸದ್ಯ ಜೈಲಿನ ನಿಯಮ ಉಲ್ಲಂಘನೆ ಮಾಡಿದ ಆರೋಪ ದರ್ಶನ್ ಮೇಲೆ ಇದೆ.

ಇನ್ನು ರೇಣುಕಾ ಸ್ವಾಮಿ ಕೊಲೆ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ಆದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದರು. ಅದರಂತೆ ಅವರನ್ನು ಶಿಫ್ಟ್ ಮಾಡಲಾಗುತ್ತಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿ ದರ್ಶನ್ ಅವರು ಜೂನ್ 11ರಂದು ಬಂಧನಕ್ಕೆ ಒಳಗಾದರು. ಸೆಪ್ಟೆಂಬರ್ 11ಕ್ಕೆ ದರ್ಶನ್ ಬಂಧನಕ್ಕೆ ಒಳಗಾಗಿ ಮೂರು ತಿಂಗಳು ಕಳೆಯಲಿದೆ.
