ಸರ್ಕಾರಿ ಬಂಗಲೆ ಖಾಲಿ ಮಾಡದ ಮಾಜಿ ಸಂಸದೆ ಮಹುವಾ ಮೊಯಿತ್ರಾಗೆ ನೋಟಿಸ್ ಜಾರಿ
![]() |
ಸರ್ಕಾರಿ ಬಂಗಲೆಯನ್ನು ತೆರವು ಮಾಡದಿದ್ದಕ್ಕಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಎಸ್ಟೇಟ್ ನಿರ್ದೇಶನಾಲಯ (ಡಿಒಇ) ಸೋಮವಾರ ಶೋಕಾಸ್ ನೋಟಿಸ್ ನೀಡಿದೆ. ನಗರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ಈ ಮಾಹಿತಿಯನ್ನು ನೀಡಿದೆ.ಕಳೆದ ವರ್ಷ ಡಿಸೆಂಬರ್ 8 ರಂದು ತೃಣಮೂಲ ಕಾಂಗ್ರೆಸ್ ಸಂಸದೆ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು. ಅವರ ಖಾತೆಯನ್ನು ರದ್ದುಗೊಳಿಸಿದ್ದರಿಂದ ಜನವರಿ 7 ರೊಳಗೆ ಬಂಗಲೆಯನ್ನು ಖಾಲಿ ಮಾಡುವಂತೆ ತಿಳಿಸಲಾಯಿತು. ಆದರೆ ಇದುವರೆಗೂ ಬಂಗಲೆ ಖಾಲಿ ಮಾಡದ ಕಾರಣ ಶೋಕಾಸ್ ನೋಟಿಸ್ ನೀಡಿದ್ದು 3 ದಿನಗಳಲ್ಲಿ ಉತ್ತರಿಸುವಂತೆ ಎಸ್ಟೇಟ್ ನಿರ್ದೇಶನಾಲಯ ಕೇಳಿದೆ.ಮೊಯಿತ್ರಾ ಅವರಿಗೆ ನೀಡಲಾದ ಶೋಕಾಸ್ ನೊಟೀಸ್ ನಲ್ಲಿ ಸರ್ಕಾರಿ ಬಂಗಲೆಯನ್ನು ಏಕೆ ಇನ್ನೂ ತೆರವು ಮಾಡಿಲ್ಲ ಎಂದು ಕೇಳಲಾಗಿದ್ದು ಇದಕ್ಕೆ ಉತ್ತರ ನೀಡುವಂತೆ ಕೇಳಿದೆ.

