ಸುದ್ದಿಗಳುಶಬರಿಮಲೆ: ದರ್ಶನ ಅವಧಿ 1 ತಾಸು ವಿಸ್ತರಣೆ

ಶ್ರೀ ಕ್ಷೇತ್ರ ಶಬರಿಮಲೆಗೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವುದರಿಂದ ದರ್ಶನದ ಅವಧಿಯನ್ನು ಒಂದು ತಾಸು ಹೆಚ್ಚಿಸುವ ತೀರ್ಮಾನವನ್ನು ಟ್ರಾವಂಕೂರು ದೇವಸ್ವಂ ಬೋರ್ಡ್ ರವಿವಾರ ತೆಗೆದುಕೊಂಡಿದೆ. ಇದುವರೆಗೆ ಅಪರಾಹ್ನ 4ರಿಂದ ರಾತ್ರಿ 11 ಗಂಟೆಯ ವರೆಗೆ ದರ್ಶನಕ್ಕೆ ಅವಕಾಶ ಇತ್ತು, ಇದನ್ನು ಅಪರಾಹ್ನ 3ರಿಂದಲೇ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಪಟ್ಟನಂತಿಟ್ಟ ಜಿಲ್ಲಾಡಳಿತ ತಿಳಿಸಿದೆ.ದರ್ಶನಕ್ಕಾಗಿ ಸರತಿಯಲ್ಲಿ ನಿಂತಿರುವ ಭಕ್ತರ ಅನುಕೂಲಕ್ಕಾಗಿ ಕುಡಿಯುವ ನೀರು ಮತ್ತು ಬಿಸ್ಕತ್ತುಗಳನ್ನು ವಿತರಿಸಲಾಗುತ್ತಿದೆ ಎಂದೂ ಅದು ಹೇಳಿದೆ.
Watch Vidoe news Here
