ಒಂದೂವರೆ ತಿಂಗಳ ಮಗುವಿನ ಮರಣಕ್ಕೆ ಲಸಿಕೆ ಓವರ್‌ಡೋಸ್ ಕಾರಣ? ಸರ್ಕಾರಿ ಆಸ್ಪತ್ರೆಯ ವಿರುದ್ಧ ಪ್ರಕರಣ ದಾಖಲೆ

ಬೆಳಗಾವಿ : ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷಕ್ಕೆ ಮೂರು ತಿಂಗಳ ಪುಟಾಣಿ ಸಾವನ್ನಪ್ಪಿರುವ ಘಟನೆ ಅಥಣಿಯ ಕಾಗವಾಡ ತಾಲೂಕಿನ ಮೊಳೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮಗುವಿಗೆ ಶುಕ್ರವಾಋ ಮೋಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ, ಪೆಂಟಾ-1, ಐಪಿವಿ-1, ಪಿವಿಸಿ-1, ರೋಟಾ-1, ವೈರಸ್ ಡ್ರಾಪ್ ನೀಡಲಾಗಿತ್ತು.
ರಾತ್ರಿ ಮಗುವಿಗೆ ಜ್ವರ ಕಾಣಿಸಿಕೊಂಡಿದ್ದು, ತುಸು ಹೊತ್ತಿನಲ್ಲೇ ಮಗು ಅಸುನೀಗಿದೆ.
ಓವರ್ ಡೋಸ್ ನೀಡಿದ ವೈದ್ಯರ ನಿರ್ಲಕ್ಷವೇ ಇದಕ್ಕೆ ಕಾರಣ ಎಂದು ಮಗುವಿನ ಪೋಷಕರು ಆರೋಪ ಮಾಡಿದ್ದಾರೆ.
ಮಗು ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಬಸಗೌಡ ಕಾಗೆ ಪ್ರತಿಕ್ರಿಯೆ ನೀಡಿದ್ದು. ಒಂದುವರೆ ತಿಂಗಳ ಮಗುವಿಗೆ ಹೃದಯ ತೊಂದರೆ ಇತ್ತು. ಲಸಿಕೆ ಪಡೆದ ಬೇರೆ ಮಕ್ಕಳಲ್ಲಿ ಯಾವುದೇ ತೊಂದರೆ ಕಂಡುಬಂದಿಲ್ಲ. ಸರ್ಕಾರಿ ಆಸ್ಪತ್ರೆಗೆ ಬರುವ ಮೊದಲೇ ಮಗು ಸಾವನಪ್ಪಿದ್ದು ಈಗಾಗಲೇ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗುತ್ತಿದೆ ಎಂದಿದ್ದಾರೆ.
ಸರ್ಕಾರಿ ವೈದ್ಯರ ವಿರುದ್ದ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.