Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರಿನಲ್ಲಿ ₹10 ಕೋಟಿ ಮೌಲ್ಯದ MDMA ಜಪ್ತಿ: ವಿದೇಶಿ ಮಹಿಳೆ ಪ್ರಿನ್ಸಸ್ ಬಂಧ

Spread the love

ಬೆಂಗಳೂರಿನಲ್ಲಿ 10 ಕೋಟಿ ರೂ. ಮೌಲ್ಯದ MDMA ಡ್ರಗ್ಸ್‌ ಜಪ್ತಿ: ಓದಲು ಬಂದವಳು ಪೆಡ್ಲರ್ ಆದಳು

ಬೆಂಗಳೂರು: ಸಿಸಿಬಿ (CCB Police) ಹಾಗೂ ಬೆಂಗಳೂರಿನ ಚಿಕ್ಕಜಾಲ ಠಾಣೆಯ ಪೊಲೀಸರು  ಭರ್ಜರಿ ಕಾರ್ಯಾಚರಣೆ ನಡೆಸಿ 10 ಕೋಟಿ ರೂಪಾಯಿ ಮೌಲ್ಯದ 5.325 ಕೆಜಿ ಎಂಡಿಎಂಎ  ಜಪ್ತಿ ಮಾಡಿದ್ದಾರೆ. ಕಳೆದ 3 ವರ್ಷದ ಹಿಂದೆ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದಿದ್ದ ಪ್ರಿನ್ಸಸ್ ಎಂಬ ವಿದೇಶಿ ಮಹಿಳೆ ಡ್ರಗ್ ಪೆಡ್ಲಿಂಗ್‌ ಮಾಡುತ್ತಿದ್ದಳು. ಆದ್ರೆ, ಇಂದು(ಜೂನ್ 13) ಚಿಕ್ಕಜಾಲ ಠಾಣಾ ವ್ಯಾಪ್ತಿಯ ರಾಜಾನುಕುಂಟೆ ಬಳಿ ವ್ಯಾಪಾರ ಮಾಡುವಾಗ ಸಿಕ್ಕಿಬಿದ್ದಿದ್ದಾಳೆ. ಬಂಧಿತ ಪ್ರಿನ್ಸಸ್ ನಿಂದ 10 ಕೋಟಿ ರೂ. ಮೌಲ್ಯದ 5.325 ಕೆಜಿ ಎಂಡಿಎಂಎ ಜಪ್ತಿ ಮಾಡಿದ್ದಾರೆ.

ಕಳೆದ 3 ವರ್ಷದ ಹಿಂದೆ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದಿದ್ದ ಪ್ರಿನ್ಸಸ್, ಆರಂಭದಲ್ಲಿ ನವದೆಹಲಿಯಲ್ಲಿ ವಾಸ ಮಾಡಿದ್ದಳು. ನಂತರ ತೆಲಂಗಾಣ ಯೂನಿವರ್ಸಿಟಿಯಲ್ಲಿ ವ್ಯಾಸಂಗ ಮಾಡುವುದಾಗಿ ಎಜುಕೇಷನ್ ವೀಸಾ ಪಡೆದಿದ್ದಳು. ಆದ್ರೆ, ಕಾಲೇಜಿಗೆ ದಾಖಲಾಗದೇ ಡ್ರಗ್ ಪೆಡ್ಲಿಂಗ್ ಗೆ ಇಳಿದಿದ್ದಳು. ದೆಹಲಿಯಿಂದ ಬೆಂಗಳೂರಿಗೆ ಬಸ್ ಮೂಲಕ ಡ್ರಗ್ ಸಾಗಾಟ ಮಾಡಿದ್ದು, ಚಿಕ್ಕಜಾಲ ಠಾಣಾ ವ್ಯಾಪ್ತಿಯ ರಾಜಾನುಕುಂಟೆ ಬಳಿ ವ್ಯಾಪಾರ ಮಾಡುವಾಗ ಸಿಕ್ಕಿಬಿದ್ದಿದ್ದಾಳೆ. ಈ ಸಂಬಂಧ ಚಿಕ್ಕಜಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸಿದ್ದಾರೆ.

ಮಾರ್ಚ್​ ನಲ್ಲಿ ಅಷ್ಟೇ ಮಂಗಳೂರು ಸಿಸಿಬಿ ಪೊಲೀಸರು ರಾಜಧಾನಿ ಬೆಂಗಳೂರಿನಲ್ಲಿ 75 ಕೋಟಿ ರೂ. ಮೌಲ್ಯದ 37.87 ಕೆಜಿ ಡ್ರಗ್ಸ್​ ಜಪ್ತಿ ಮಾಡಿ ವಿದೇಶಿ ಪ್ರಜೆಗಳನ್ನು ಬಂಧಿಸಿದ್ದರು. ಸಿಸಿಬಿ ಪೊಲೀಸರು ಕಳೆದ ಐದು ತಿಂಗಳಿಂದ ಕಾರ್ಯಾಚರಣೆ ನಡೆಸಿ ಡ್ರಗ್ಸ್​ ಜಾಲ ಭೇದಿಸಿದ್ದರು. ಇದು ಕರ್ನಾಟಕದ ಇತಿಹಾಸದಲ್ಲಿ ಅತೀ ದೊಡ್ಡ ಡ್ರಗ್ಸ್ (Drugs) ಕಾರ್ಯಾಚರಣೆಯಾಗಿದೆ.

ಎಂಡಿಎಂಎ ಡ್ರಗ್ಸ್ ದೆಹಲಿಯ ಲ್ಯಾಬ್​ನಲ್ಲಿ ನಿತ್ಯ ತಯಾರಾಗುತ್ತಿತ್ತು. ವಾರಕ್ಕೊಮ್ಮೆ ಬೆಂಗಳೂರಿಗೆ ವಿಮಾನದಲ್ಲಿ ಮೂಟೆಗಟ್ಟಲೆ ಬರುತ್ತಿತ್ತು. ವಾರಕ್ಕೆ 15-30 ಕೆಜಿ ಮತ್ತು ತಿಂಗಳಿಗೆ ಕನಿಷ್ಠ 100 ಕೆಜಿ ಎಮ್​ಡಿಎಮ್​ಎ ಡ್ರಗ್ಸ್ ಬೆಂಗಳೂರಿಗೆ ಬರುತ್ತಿದೆ. ಬೆಂಗಳೂರಿನಲ್ಲಿ ತಿಂಗಳಿಗೆ ಕನಿಷ್ಠ 50-60 ಕೋಟಿ ರೂಪಾಯಿ ಡ್ರಗ್ ವಹಿವಾಟು ನಡೆಯುತ್ತದೆ ಎಂಬ ಅಂಶ ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿತ್ತು.


Spread the love
Share:

administrator

Leave a Reply

Your email address will not be published. Required fields are marked *