Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಿದ್ಯುತ್ ತಂತಿ ತಗುಲಿ 11 ವರ್ಷದ ಬಾಲಕಿ ಸಾವು, ಬೆಸ್ಕಾಂ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ

Spread the love

BREAKING : ಬೆಂಗಳೂರಲ್ಲಿ ಘೋರ ದುರಂತ : ವಿದ್ಯುತ್ ತಂತಿ ತಗುಲಿ 11 ವರ್ಷದ ಬಾಲಕಿ ಸಾವು

ಆನೇಕಲ್: ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ನಡೆದಿದೆ.

ತನಿಷ್ಕಾ (11) ಮೃತ ಬಾಲಕಿ. ಬಾಲಕಿ ಮನೆಯ ಬಳಿ ಆಟವಾಡುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಳು.

ತಕ್ಷಣ ಅವಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲೇ ಆಕೆ ಸಾವನ್ನಪ್ಪಿದ್ದಳು.

ಮಗಳನ್ನು ಕಳೆದುಕೊಂಡಿರುವ ತಂದೆ-ತಾಯಿ ಆಕ್ರಂದನ ಮುಗಿಲು ಮುಟ್ಟಿದೆ. ಮಗಳ ಸಾವಿಗೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಕಣ್ಣೀರಿಟ್ಟಿದ್ದಾರೆ. ಸೂರ್ಯನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *