₹17,000 ಕೋಟಿ ಸಾಲ ವಂಚನೆ ಪ್ರಕರಣ: ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಬಂಧನ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಬಂಧನ ಮಾಡಲಾಗಿದೆ.

ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್ ಪವರ್ ಲಿಮಿಟೆಡ್‌ನ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಪಾಲ್ ಅವರನ್ನು 17,000 ಕೋಟಿ ರೂ. ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.