Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜ ಸಾವು!

Spread the love

ಬೆಳಗಾವಿ : ಜಿಲ್ಲೆಯ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಳವಳ ವ್ಯಕ್ತಪಡಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇನ್ನೂ ಈ ಜಿಂಕೆಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಹಾಗೂ ಇನ್ನಿತರ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ ಎಂಬ ಬಗ್ಗೆ ತಜ್ಞರ ಸಮಿತಿ ರಚಿಸಿ, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಮೃಗಾಲಯದಲ್ಲಿರುವ ಪ್ರಾಣಿಗಳು ಈ ರೀತಿ ಸಾವಿಗೀಡಾಗುವುದು ಆತಂಕದ ವಿಚಾರವಾಗಿದ್ದು, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಆದೇಶ ನೀಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹೀಗಾಗಿ ಮೃಗಾಲಯದ ಬೇರೆ ಯಾವುದೇ ಪ್ರಾಣಿಗಳಿಗೂ ಸೋಂಕು ತಗುಲದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *