Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

₹500 ಲಂಚ ಪ್ರಕರಣ – ನಿವೃತ್ತಿಯಾಗಿ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ!

Spread the love

BELAGAVI: 30 ವರ್ಷಗಳ ಹಿಂದೆ 500 ರೂ. ಲಂಚ ಪಡೆದಿದ್ದ ಗ್ರಾಮ ಲೆಕ್ಕಾಧಿಕಾರಿ- ನಿವೃತ್ತಿಯಾಗಿ 10 ವರ್ಷಗಳ ಬಳಿಕ ಜೈಲು ಶಿಕ್ಷೆ!

ಬೆಳಗಾವಿ: 30 ವರ್ಷಗಳ ಹಿಂದೆ 500 ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿವೃತ್ತಿಯಾಗಿ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ ವಿಧಿಸಿರುವಂತಹ ವಿಚಿತ್ರ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಇನ್ನೊಂದು ವಿಚಿತ್ರ ವಿಚಾರವೆಂದರೆ ದೂರುದಾರರು ಕೂಡಾ ಮೃತಪಟ್ಟು 5 ವರ್ಷಗಳೇ ಕಳೆದಿವೆ.

ನಾಗೇಶ್ ಶಿವಂಗೇಕರ್ ಜೈಲು ಶಿಕ್ಷೆಗೆ ಒಳಗಾದ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ. ನಾಗೇಶ್ ಶಿವಂಗೇಕರ್ 30 ವರ್ಷ ಹಿಂದೆ ಪಹಣಿ ಪತ್ರದಲ್ಲಿ ವಾಟ್ನಿ ಮಾಡಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಲಕ್ಷ್ಮಣ ಕಟಾಂಬಳೆ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಶಿವಂಗೇಕರ್ 500 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು.

ಈ ಘಟನೆ ಸಂಬಂಧ 2006ರಲ್ಲಿ ಶಿವಂಗೇಕರ್ ಅವರಿಗೆ ಒಂದು ವರ್ಷ ಜೈಲು ಮತ್ತು 1 ಸಾವಿರ ರೂ. ದಂಡ ವಿಧಿಸಲಾಗಿತ್ತು. ಬಳಿಕ ಧಾರವಾಡ ಹೈಕೋರ್ಟ್ ‌ಮೋರೆ ಹೋಗಿದ್ದ ನಾಗೇಶ್ ಶಿವಂಗೇಕರ್ಗೆ ರಿಲೀಫ್ ಸಿಕ್ಕಿತ್ತು. ಆದರೆ ಹೈಕೋರ್ಟ್ ‌ಆದೇಶ ಪ್ರಶ್ನಿಸಿ ಲೋಕಾಯುಕ್ತ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.

ಇಂದು ಸುಪ್ರೀಂ ಕೋರ್ಟ್ ಲೋಕಾಯುಕ್ತ ಪರ ಪರ ತೀರ್ಪು ಪ್ರಕಟಿಸಿದೆ. ಸದ್ಯ ಶಿವಂಗೇಕರ್ ನಿವೃತ್ತಿಯಾಗಿ 10 ವರ್ಷಗಳ ಬಳಿಕ ಈಗ ಜೈಲುಪಾಲಾಗಿದ್ದಾರೆ. ಬೆಳಗಾವಿ ಹಿಂಡಲಗಾ ಜೈಲಿಗೆ ನಾಗೇಶ್ ಶಿವಂಗೇಕರ್ನ್ನು ಲೋಕಾಯುಕ್ತ ಪೊಲೀಸರು ರವಾನಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *