Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಳೆಯಿಂದ 63 ಕೆರೆಗಳು ಭರ್ತಿ: ನಗರ ಜಲಮಟ್ಟ ಸುಧಾರಣೆಗೆ ಬಿಬಿಎಂಪಿ ಹೊಸ ಹೆಜ್ಜೆ

Spread the love

ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 183 ಕೆರೆಗಳಲ್ಲಿ ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಯಿಂದಾಗಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಾಗಿದ್ದು, 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರಿತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ ಕೆರೆಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯ 32,514 ದಶಲಕ್ಷ ಲೀಟರ್‌ಗಳಾಗಿದೆ. ಏಪ್ರಿಲ್ 2025ರಲ್ಲಿ ಈ ಕೆರೆಗಳಲ್ಲಿ ಕೇವಲ 10,595 ದಶಲಕ್ಷ ಲೀಟರ್ ನೀರು ಸಂಗ್ರಹವಾಗಿದ್ದು, ಕೇವಲ 3 ಕೆರೆಗಳು ಮಾತ್ರ ಪೂರ್ಣ ಪ್ರಮಾಣದಲ್ಲಿ ತುಂಬಿದ್ದವು. ಸುಮಾರು 63 ಕೆರೆಗಳು ಒಣಗುವ ಹಂತದಲ್ಲಿದ್ದವು. ಆದರೆ, ಇತ್ತೀಚಿನ ಮಳೆಯಿಂದಾಗಿ ಕೆರೆಗಳಲ್ಲಿ ಒಟ್ಟು 26,056 ದಶಲಕ್ಷ ಲೀಟರ್‌ ನೀರು ಸಂಗ್ರಹವಾಗಿದ್ದು, ಏಪ್ರಿಲ್‌ಗೆ ಹೋಲಿಸಿದರೆ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.

ತುಂಬಿರುವ ಕೆರೆಗಳ ಸುತ್ತಮುತ್ತ ಮತ್ತು ಕಾಲುವೆಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಕೆರೆಗಳಿಗೆ ನೀರು ಹರಿದು ಹೋಗುವ ಕಾಲುವೆಗಳಲ್ಲಿ ಕಸ, ಕಡ್ಡಿಗಳು, ಪ್ಲಾಸ್ಟಿಕ್ ಮತ್ತು ಇತರ ತ್ಯಾಜ್ಯವನ್ನು ತೆರವುಗೊಳಿಸಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಸ್ವಚ್ಛತಾ ಕಾರ್ಯ ತೀವ್ರಗತಿಯಲ್ಲಿ ನಡೆಯುತ್ತಿದೆ.

ಈ ಭಾರೀ ಮಳೆಯಿಂದ ಬೆಂಗಳೂರಿನ ಕೆರೆಗಳು ಪುನಶ್ಚೇತನಗೊಂಡಿದ್ದು, ನಗರದ ಭೂಗತ ಜಲಮಟ್ಟ ಸುಧಾರಣೆಗೆ ಇದು ಸಕಾರಾತ್ಮಕ ಬೆಳವಣಿಗೆಯಾಗಿದೆ.


Spread the love
Share:

administrator

Leave a Reply

Your email address will not be published. Required fields are marked *