ಬ್ಯಾಂಕ್ ಲಾಕರ್‌ನಲ್ಲಿ ಇಟ್ಟ 8 ಲಕ್ಷ ರೂಪಾಯಿ ಗೆದ್ದಲು – ಗ್ರಾಹಕನಿಂದ ದೂರು

ಮಂಗಳೂರು: ಬ್ಯಾಂಕ್ ಲಾಕರ್‌ನಲ್ಲಿಇಟ್ಟಿದ್ದ 8 ಲಕ್ಷ ರೂಪಾಯಿ ಗೆದ್ದಲಿಗೆ ಬಲಿಯಾಗಿದ್ದಕ್ಕೆ ಗ್ರಾಹಕರೊಬ್ಬರು ಈಗ ಬೆಂಗಳೂರಿನ ಪ್ರಧಾನ ಕಚೇರಿಗೆ ದೂರು ನೀಡಿದ್ದಾರೆ.
ಸಫಲ್ ಮಂಗಳೂರಿನ ಕೋಟೆಕಾರ್‌ನಲ್ಲಿರುವ ಕೆನರಾ ಬ್ಯಾಂಕಿನಲ್ಲಿ 8 ಲಕ್ಷ ರೂ. ಇಟ್ಟಿದ್ದರು. 6 ತಿಂಗಳ ಬಳಿಕ ಔಷಧಿಗಾಗಿ ದುಡ್ಡು ತೆಗೆಯಲು ಲಾಕರ್ ತೆರೆದಿದ್ದಾರೆ.
ಬ್ಯಾಂಕ್ ನವರೇ ಖುದ್ದಾಗಿ ಲಾಕರ್ ಓಪನ್ ಮಾಡಿದ್ದಾರೆ. ಲಾಕರ್ ಮಳೆನೀರಿನಲ್ಲಿ ನೆಂದ ಸ್ಥಿತಿಯಲ್ಲಿದ್ದರೆ ದುಡ್ಡು ಸಂಪೂರ್ಣವಾಗಿ ಕಪ್ಪಾಗಿ ಹುಡಿ ಹುಡಿಯಾಗಿ ಗೆದ್ದಲು ಹಿಡಿದು ಚೂರಾಗಿ ಬಿದ್ದಿದೆ. ಎಂಟು ಲಕ್ಷ ರೂ. ದುಡ್ಡು ಇದೇ ರೀತಿ ಆಗಿದೆ.
