Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸರ್ಕಾರಿ ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಅಪ್ರಾಪ್ತ ವಿದ್ಯಾರ್ಥಿನಿ!

Spread the love

ಕಾರವಾರ: 9ನೇ ತರಗತಿ ವಿದ್ಯಾರ್ಥಿನಿಯೋರ್ವಳು (Student) ಹಾಸ್ಟೆಲ್​​​ನಲ್ಲಿ (Hostel) ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ  ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ (Sirsi) ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಚ್ಚರಿ ಅನ್ನಿಸಿದರೂ ಸತ್ಯ. ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿದ್ದ 9ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಿರಸಿ ತಹಶಿಲ್ದಾರ್ ಹಾಗೂ ಪಿಎಸ್ಐ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಮುಖ್ಯಾಂಶಗಳು

  • ಮಗುವಿಗೆ ಜನ್ಮ ನೀಡಿದ ಹಾಸ್ಟೆಲ್ ವಿದ್ಯಾರ್ಥಿನಿ
  • ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ
  • ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿರುತ್ತಿದ್ದ 9 ನೇ ತರಗತಿ ವಿದ್ಯಾರ್ಥಿನಿ.
  • ಸದ್ಯ ಮಗುವಿನ ಪರಿಸ್ಥಿತಿ ಗಂಭೀರವಾಗಿದ್ದು, ಸ್ಥಳಕ್ಕೆ ಶಿರಸಿ ತಹಶಿಲ್ದಾರ ಹಾಗೂ ಪಿಎಸ್ಐ ಭೇಟಿ

ಆಕೆ 9ನೇ ತರಗತಿ ಅಂದ್ರೆ ಏನೋ ಹದಿನಾಲ್ಕು ಹದಿನೈದು ವರ್ಷ ಇರಬಹುದು. ತಮ್ಮ ಮಗಳು ಹಾಸ್ಟೆಲ್​ನಲ್ಲಿ ಸುರಕ್ಷಿತಳಾಗಿದ್ದಾಳೆ ಎಂದು ಆಕೆಯ ಪೋಷಕರು ಕೂಡ ನಿರಾಳವಾಗಿದ್ದರು. ಆದ್ರೆ, ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಗುವನ್ನು ಹೇರಿರುವ ಸುದ್ದಿ ಕೇಳಿ ಶಾಕ್​​​ ಆಗಿದ್ದಾರೆ. ಬಾಲಕಿಯ ಈ ಸ್ಥಿತಿಗೆ ಯಾರು ಕಾರಣ? ಗರ್ಭಿಣಿಯಾಗಿರುವುದು ಗೊತ್ತಾಗಿಲ್ವಾ ಹೀಗೆ ಹತ್ತಾರು ಪ್ರಶ್ನೆಗಳು ಉದ್ಭವಿಸಿವೆ. ಯಾಕಂದ್ರೆ, ಮೊನ್ನೆ ಅಷ್ಟೇ ಶಾಲೆಗಳು ಪ್ರಾರಂಭವಾಗಿದ್ದು, 10 ದಿನದಲ್ಲೇ ಮಗುವಿಗೆ ಜನ್ಮ ನೀಡಿರುವುದು ನಿಜಕ್ಕೂ ಅಚ್ಚರಿ ಮೂಡಿಸಿದೆ. ಸದ್ಯ ಪೊಲೀಸರು ತನಿಖೆ ನಡೆಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *