ಮೂರು ತಾಸಿನಲ್ಲಿ ಬ್ಲಾಸ್ಟ್ ಎಚ್ಚರಿಕೆ: ಡಿಸಿ ಕಚೇರಿಗೆ ಇ-ಮೇಲ್ ಮೂಲಕ ಬೆದರಿಕೆ ಪತ್ರ

ಚಾಮರಾಜನಗರ: ಡಿ.ಸಿ. ಕಚೇರಿಯನ್ನು ಬಾಂಬ್ ಇಟ್ಟು ಉಡಾಯಿಸುವುದಾಗಿ ದುಷ್ಕರ್ಮಿಗಳು ಬೆದರಿಕೆ ಒಡ್ಡಿರುವ ಘಟನೆ ನಡೆದಿದೆ. ಕಿಡಿಗೇಡಿಗಳು ಇ-ಮೇಲ್ ಮೂಲಕ ಬೆದರಿಕೆ ಪತ್ರ ರವಾನಿಸಿದ್ದು, ಮೂರು ತಾಸಿನಲ್ಲಿ ಬಾಂಬ್ ಬ್ಲಾಸ್ಟ್ ಆಗಲಿದೆ ಎಂದಿದ್ದಾರೆ.
ಬೆದರಿಕೆ ಪತ್ರದ ಸುದ್ದಿ ತಿಳಿದ ಕೂಡಲೇ ಬಾಂಬ್ ನಿಷ್ಕ್ರಿಯದಳ, ಶ್ವಾನದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದೊಂದು ಹುಸಿ ಬೆದರಿಕೆ ಎಂದು ಸ್ಪಷ್ಟವಾಗಿದೆ.ಸೈಬರ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

