Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಿರಾನಾ ಬೆಟ್ಟದ ಅಣ್ವಸ್ತ್ರ ಸಂಗ್ರಹದ ಮೇಲೆ ದಾಳಿ ಕುರಿತು ಚರ್ಚೆ-ಭಾರತದಿಂದ ನಿರಾಕರಣೆ

Spread the love

ನವದೆಹಲಿ: ಕಿರಾನಾ ಬೆಟ್ಟದಲ್ಲಿ ಪರಮಾಣು ಸ್ಥಾವರವಿದೆ ಎಂದು ತಿಳಿಸಿದ್ದಕ್ಕೆ ಧನ್ಯವಾದಗಳು ಎಂದು ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ಮಾರ್ಷಲ್ ಎಕೆ ಭಾರ್ತಿ ಹೇಳಿದ್ದಾರೆ.

ಇಂದು ಮಧ್ಯಾಹ್ನ ಪಾಕ್‌ ವಿರುದ್ಧ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಬಗ್ಗೆ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (ಡಿಜಿಎಂಒ) ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ವೈಸ್ ಮಾರ್ಷಲ್ ಎಕೆ ಭಾರ್ತಿ ಮತ್ತು ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕ ವೈಸ್ ಅಡ್ಮಿರಲ್ ಎಎನ್ ಪ್ರಮೋದ್ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದರು.

ಈ ಸಂದರ್ಭದಲ್ಲಿ ಮಾಧ್ಯಮದ ಪ್ರತಿನಿಧಿಯೊಬ್ಬರು, ಪಾಕಿಸ್ತಾನ ಅಣ್ವಸ್ತ್ರ ಸಂಗ್ರಹ ಇರುವ ಕಿರಾನಾ ಬೆಟ್ಟದ ಮೇಲೆ ಭಾರತ ದಾಳಿ ನಡೆಸಿದೆ ಎಂದು ಚರ್ಚೆ ನಡೆಯುತ್ತಿದೆ. ಹೀಗಾಗಿ ಆ ಜಾಗದ ಮೇಲೆ ದಾಳಿ ನಡೆದಿದ್ಯಾ ಎಂದು ಪ್ರಶ್ನೆ ಮಾಡಿದರು

ಈ ಪ್ರಶ್ನೆಗೆ ಎಕೆ ಭಾರ್ತಿ, ಕಿರಾನಾ ಬೆಟ್ಟದಲ್ಲಿ ಪರಮಾಣು ಸ್ಥಾವರವಿದೆ ಎಂದು ತಿಳಿಸಿದ್ದಕ್ಕೆ ಧನ್ಯವಾದಗಳು. ನಮಗೆ ಈ ವಿಚಾರ ತಿಳಿದಿರಲಿಲ್ಲ ಎಂದು ಉತ್ತರಿಸಿದರು. ಮುಂದುವರಿದು ಕಿರಾನಾ ಬೆಟ್ಟದ ಮೇಲೆ ನಾವು ಯಾವುದೇ ದಾಳಿ ಮಾಡಿಲ್ಲ. ಅಲ್ಲಿ ಏನಿದೆ ಎನ್ನುವುದು ಗೊತ್ತಿಲ್ಲ ಎಂದರು.

ಕಿರಾನಾ ಬೆಟ್ಟ ಎಲ್ಲಿದೆ?
ಸರ್ಗೋಧಾ  ವಾಯುನೆಲೆಯಿಂದ ರಸ್ತೆಯ ಮೂಲಕ ಕೇವಲ 20 ಕಿಮೀ ಮತ್ತು ಕುಶಾಬ್ ಪರಮಾಣು ಸ್ಥಾವರದಿಂದ 75 ಕಿಮೀ ದೂರದಲ್ಲಿ ಕಿರಾನಾ ಬೆಟ್ಟ ಇದೆ. ಸುಮಾರು 68 ಚದರ ಕಿ.ಮೀ ಪ್ರದೇಶವನ್ನು ಆವರಿಸಿರುವ ಮತ್ತು 39 ಕಿ.ಮೀ ಪರಿಧಿಯಿಂದ ಸುತ್ತುವರೆದಿರುವ ಕಿರಾನಾ ಬೆಟ್ಟಗಳು ಬಹು-ಪದರದ ರಕ್ಷಣಾ ವ್ಯವಸ್ಥೆಯೊಂದಿಗೆ ವಿನ್ಯಾಸಗೊಳಿಸಲಾಗಿದೆ. ಇದರ ಒಳಗಡೆ ಕನಿಷ್ಠ 10 ಭೂಗತ ಸುರಂಗ ಇದೆ ಎನ್ನಲಾಗುತ್ತಿದೆ.

ಚರ್ಚೆ ಆಗುತ್ತಿರುವುದು ಯಾಕೆ?
ಭಾರತ ಮತ್ತು ಪಾಕಿಸ್ತಾನದ ಮಧ್ಯೆ ತೀವ್ರ ಸಂಘರ್ಷ ನಡೆಯುತ್ತಿದ್ದಾಗ ದಿಢೀರ್‌ ಕದನ ವಿರಾಮ ಘೋಷಣೆಯಾಗಿದ್ದಕ್ಕೆ ಕಾರಣ ಕಿರಾನಾ ಬೆಟ್ಟದ ಮೇಲಿನ ದಾಳಿ ಎಂಬ ವಿಚಾರ ಕಳೆದ ಶನಿವಾರದಿಂದ ಜೋರಾಗಿ ಚರ್ಚೆ ಆಗುತ್ತಿದೆ.

ಭಾರತ ಮೇ 9 ಮತ್ತು 10ರ ರಾತ್ರಿ ಪಾಕಿಸ್ತಾನದ ಮೇಲೆ ಪ್ರಬಲವಾಗಿ ದಾಳಿ ನಡೆಸಿತ್ತು. ಅದರಲ್ಲೂ ವಾಯುಸೇನಾ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಸೇನಾ ನೆಲೆಗಳ ಜೊತೆಯಲ್ಲಿ ಶಸ್ತ್ರಾಸ್ತ್ರ ಇರುವ ಜಾಗದ ಮೇಲೂ ಕ್ಷಿಪಣಿ ಹಾಕಿದೆ. ಈ ಪೈಕಿ ಪಾಕಿಸ್ತಾನ ಅಣ್ವಸ್ತ್ರ ಸಂಗ್ರಹ ಮತ್ತು ಮಿಲಿಟರಿ ಸಂಗ್ರಹಣಾ ಸ್ಥಳ ಕಿರಾನಾ ಬೆಟ್ಟದ ಮೇಲೆಯೇ ದಾಳಿ ನಡೆಸಿದೆ ಎಂದು ವಿದೇಶಿ ಮಾಧ್ಯಮಗಳು ವರದಿ ಮಾಡಿವೆ. 


Spread the love
Share:

administrator

Leave a Reply

Your email address will not be published. Required fields are marked *