ಹರಿಹರ ತಾಲ್ಲೂಕಿನಲ್ಲಿ ದುರಂತ – ಕಾರು ಡಿಕ್ಕಿಗೆ ಇಬ್ಬರು ಯುವತಿಯರ ಬಲಿ

ದಾವಣಗೆರೆ: ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರತಾಲೂಕಿನ ಕಡರನಾಯ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹೊಳೆಸಿರಿಗೆರೆ ಸುಮಾ(24), ಕಡರನಾಯ್ಕನಹಳ್ಳಿ ಪಲ್ಲವಿ(23) ಮೃತ ದುರ್ದೈವಿಗಳು. ರಾಣೇಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ ಬೈಕ್ ಸವಾರ ಸಚಿನ್ಗೆ ಗಂಭೀರ ಗಾಯಗಳಾಗಿವೆ.
ಸಚಿನ್ ಬುಧವಾರ ಸಂಜೆ ಸಂಬಂಧಿಗಳಾದ ಸುಮಾ ಮತ್ತು ಪಲ್ಲವಿಯನ್ನು ಬೈಕ್ನಲ್ಲಿ ಕರೆದುಕೊಂಡು ಬರುವಾಗ ಎದುರುಗಡೆಯಿಂದ ಬಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಯುವತಿಯರು ರಸ್ತೆಗೆ ಎಸೆಯಲ್ಪಟ್ಟಿದ್ದರು. ಸುಮಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗಳಾಗಿದ್ದ ಪಲ್ಲವಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾಳೆ.
ಗಂಭೀರ ಗಾಯಗಳಾದ ಸಚಿನ್ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಹಾಗೂ ಚಾಲಕನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.