ಕೊಪ್ಪಳದ ಕಾರಟಗಿಯಲ್ಲಿ ಟಾಟಾ ಏಸ್ ಪಲ್ಟಿ – 31 ನರೇಗಾ ಕಾರ್ಮಿಕರಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಕೊಪ್ಪಳ: ಕಾರಟಗಿ ತಾಲೂಕಿನ ಬರಗೂರು ಕಮಾನ್ ಬಳಿ ಟಾಟಾ ಏಸ್ ವಾಹನ ಪಲ್ಟಿಯಾಗಿ ಮುಸ್ಟೂರು ಗ್ರಾಮ ಪಂಚಾಯತಿಯ 31 ನರೇಗಾ ಕಾರ್ಮಿಕರಿಗೆ ಗಾಯಗೊಂಡಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು, 28 ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹುಬ್ಬಳ್ಳಿ ಮತ್ತು ಕೊಪ್ಪಳದ ಕಿಮ್ಸ್ ಆಸ್ಪತ್ರೆಯಲ್ಲಿ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನುಳಿದ ಗಾಯಾಳುಗಳನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ಸಚಿವ ಶಿವರಾಜ ತಂಗಡಗಿ ಆಸ್ಪತ್ರೆಗೆ ಭೇಟಿ ನೀಡಿ, ಕಾರ್ಮಿಕರ ಆರೋಗ್ಯ ವಿಚಾರಿಸಿದರು. ಬುಧವಾರ (ಮೇ.14) ಬೆಳಗ್ಗೆ ನರೇಗಾ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.