‘ಕುಡುಕ ತಂದೆ ಚಿತ್ರ ಹಿಂಸೆ ನೀಡಿದ’ – ಚೈತ್ರಾ ಕುಂದಾಪುರ ತಂದೆಗೆ ತಿರುಗೇಟು

ಕುಂದಾಪುರ: ಇತ್ತೀಚೆಗಷ್ಟೇ ಅದ್ದೂರಿಯಾಗಿ ಮದುವೆಯಾಗಿದ್ದ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ವಿರುದ್ದ ಇದೀಗ ಅವರ ತಂದೆಯೇ ಆರೋಪಗಳ ಸುರಿಮಳೆ ಮಾಡಿದ್ದಾರೆ. ಇದೀಗ ತಂದೆ ಆರೋಪಕ್ಕೆ ಚೈತ್ರಾ ಕುಂದಾಪುರು ತಿರುಗೇಟು ನೀಡಿದ್ದು, ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು ಎಂದು ಇನ್ಸ್ಟಾ ಗ್ರಾಂ ನಲ್ಲಿ ಪೋಸ್ಟ್ ಹಾಕಿದ್ದಾರೆ.

ಆಕೆ ನನ್ನನ್ನು ಮದುವೆಗೆ ಕರೆದಿಲ್ಲ. ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ ಅಂತ ಆಕ್ರೋಶ ಹೊರ ಹಾಕಿದ್ದರು. ಈ ಬೆನ್ನಲ್ಲೇ ಚೈತ್ರಾ ಕುಂದಾಪುರ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತಂದೆ ಬಗ್ಗೆಯೇ ಹೀಗೆ ಬರೆದುಕೊಂಡು ಶೇರ್ ಮಾಡಿಕೊಂಡಿದ್ದಾರೆ.
ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾಟರ್ ನಾನು ಕೊಟ್ರೆ ನನ್ನ ಮಕ್ಕಳು ದೇವರು ಅನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರಾಗ್ತಾರೆ.. ಅಂತ ಬರೆದುಕೊಂಡಿದ್ದಾರೆ.