ಯಾದಗಿರಿ ಜಿಲ್ಲೆಯಲ್ಲಿ ಬಾವಿಗೆ ಬಿದ್ದು ಇಬ್ಬರು ಯುವತಿಯರ ದುರ್ಮರಣ – ಬಟ್ಟೆ ತೊಳೆಯುವ ವೇಳೆ ಅವಘಡ

ಯಾದಗಿರಿ: ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವನ್ನಪ್ಪಿದ ಘಟನೆ ಯಾದಗಿರಿಯ (Yadgir) ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ.
ಮೃತರನ್ನು ವೈಶಾಲಿ (17), ನವೀತಾ (16) ಎಂದು ಗುರುತಿಸಲಾಗಿದೆ. ಇಬ್ಬರು ಬಟ್ಟೆ ತೊಳೆಯಲು ಹೋಗಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳೀಯರು ಶವವನ್ನು ಬಾವಿಯಿಂದ ಹೊರಗೆ ತೆಗೆದಿದ್ದಾರೆ.ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.