Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಾಕೋಲೆಟ್‌ಗಳಲ್ಲಿ ಆಲ್ಕೋಹಾಲ್: ಆಹಾರ ಸುರಕ್ಷತೆ ಇಲಾಖೆ ಮಾದರಿಗಳನ್ನು ಸಂಗ್ರಹಿಸಲು ಆರಂಭ

Spread the love

ಬೆಂಗಳೂರು: ವಿದೇಶದಿಂದ ಆಮದು ಮಾಡಿಕೊಳ್ಳಲಾದ ಚಾಕೋಲೆಟ್ ಗಳಲ್ಲಿ ಆಲ್ಕೋಹಾಲ್ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಚಾಕೋಲೆಟ್ ಮಾದರಿಗಳನ್ನು ಸಂಗ್ರಹಿಸಲು ಮುಂದಾಗಿದೆ.

ಹೌದು, ಆಮದು ಮಾಡಿಕೊಂಡ ಚಾಕೊಲೇಟ್‌ಗಳಲ್ಲಿ ಆಲ್ಕೋಹಾಲ್ ಅಂಶ ಇರುವ ಬಗ್ಗೆ ಕಳವಳ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ರಾಜ್ಯದಾದ್ಯಂತ ಆಮದು ಮಾಡಿಕೊಂಡ ಚಾಕೊಲೇಟ್‌ಗಳ ಮಾದರಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದೆ.

ಲೇಬಲ್ ಗಳ ಮೇಲೆ ಗಮನ ಹರಿಸುತ್ತಿರುವ ಇಲಾಖೆ ವಿಶೇಷವಾಗಿ ಆಲ್ಕೋಹಾಲ್ ಅಂಶ ಇರುವ ಬಗ್ಗೆ ಸ್ಪಷ್ಟ ಮಾಹಿತಿ ಬಹಿರಂಗಪಡಿಸದೆ ಮಾರಾಟವಾಗುವ ಉತ್ಪನ್ನಗಳಿಗೆ ಸಂಬಂಧಿಸಿದಂತೆ ನಿಗಾ ವಹಿಸಿದೆ. ರಾಷ್ಟ್ರೀಯ ವಾರ್ಷಿಕ ಕಣ್ಗಾಗಲು ಯೋಜನೆಯ ಭಾಗವಾಗಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ನಿರ್ದೇಶನ ಪಡೆದ ಬಳಿಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಈ ಅಭಿಯಾನ ಆರಂಭಿಸಿದೆ


Spread the love
Share:

administrator

Leave a Reply

Your email address will not be published. Required fields are marked *