Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಳಗಾವಿಯಲ್ಲಿ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ವಿರುದ್ಧ ಪೋಕ್ಸೋ ಪ್ರಕರಣ

Spread the love

ಬೆಳಗಾವಿ: ಹದಿನೈದು ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರು ಸೇರಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಗಾವಿ ಹೊರ ವಲಯದ ರೆಸಾರ್ಟ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಒಂದು ವಾರದ ಹಿಂದೆ ಘಟನೆ ನಡೆದಿದ್ದು, ಸಾಕೀಬ್ ಹಾಗೂ ಇಬ್ಬರು ಅಪ್ರಾಪ್ತರು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಸಾಕೀಬ್ ತನ್ನ ಹೆಸರಲ್ಲಿ ರೂಮ್ ಬುಕ್ ಮಾಡಿದ್ದ. ಬಾಲಕಿಯ ಸ್ನೇಹಿತನಾಗಿರುವ ಅಪ್ರಾಪ್ತ ಆಕೆಯನ್ನು ಕರೆದುಕೊಂಡು ರೂಮಿಗೆ ಹೋಗಿದ್ದು, ಮೂವರು ಸೇರಿಕೊಂಡು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಮನೆಗೆ ವಾಪಸ್ ಬಂದ ಬಳಿಕ ಬಾಲಕಿ ಹೊಟ್ಟೆ ನೋವು ಎಂದಿದ್ದಳು. ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳಾದ ಸಾಕೀಬ್ ಮತ್ತು ಓರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದು, ಮತ್ತೋರ್ವ ಅಪ್ರಾಪ್ತ ಬಾಲಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. 


Spread the love
Share:

administrator

Leave a Reply

Your email address will not be published. Required fields are marked *