ಸಿಇಟಿ 2025 ಫಲಿತಾಂಶ ಪ್ರಕಟ: ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಪ್ರಕಟಣೆ

ಬೆಂಗಳೂರು: ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರು ಪತ್ರಿಕಾಗೋಷ್ಠಿ ನಡೆಸಿ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025 ರ ಫಲಿತಾಂಶ ಪ್ರಕಟಿಸಿದರು.
ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಪೈಕಿ 3,11,000 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು ಎಂದು ಅವರು ತಿಳಿಸಿದರು.ಸಿಇಟಿ ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿ ಚೈತ್ಯನ್ಯ ಸಿಬಿಎಸ್ಇ ಶಾಲೆಯ ಭವೇಶ್ ಜಯಂತಿ (98.67%) ಮೊದಲ ಶ್ರೇಣಿ ಗಳಿಸಿದ್ದಾರೆ. ಚೈತನ್ಯ ಟೆಕ್ನೋ ಸ್ಕೂಲ್, ಕನಕಪುರ ರಸ್ತೆ ಉತ್ತರಹಳ್ಳಿ ಇದರ ವಿದ್ಯಾರ್ಥಿ ಸಾತ್ವಿಕ್ ಬಿರಾದರ್ (99.33%) ಎರಡನೇ ಶ್ರೇಣಿ, ದಿನೇಶ್ ಗೋಮತಿ ಶಂಕರ್ ಅರುಣಾಚಲಂ 3ನೇ ಶ್ರೇಣಿ (99%) ಗಳಿಸಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು. ಅಗ್ರಿಕಲ್ಚರ್ ವಿಭಾಗದಲ್ಲಿ ಅಕ್ಷಯ್ ಎಂ ಪ್ರಥಮ ಸ್ಥಾನ, ಸಾಯಿಶ್ ಶರವಣ ಪಂಡಿತ್ ದ್ವಿತೀಯ ಸ್ಥಾನ ಹಾಗೂ ಸುಚಿತ್.ಪಿ. ಪ್ರಸಾದ್ ಮೂರನೇ ಸ್ಥಾನ ಗಳಿಸಿದ್ದಾರೆ ಎಂದರು. ಪಶು ವೈದ್ಯಕೀಯ ವಿಭಾಗದಲ್ಲಿ ಯಲಹಂಕದ ನಾರಾಯಣ ಇ-ಟೆಕ್ನೋ ಕಾಲೇಜಿನ ಹರೀಶ್ ರಾಜ್ ಪ್ರಥಮ ಶ್ರೇಣಿ, ಹೆಚ್ಎಸ್ಆರ್ ಲೇಔಟ್ಆ ನ ತ್ರೇಯ ನ್ಯಾಷನಲ್ ಪಬ್ಲಿಕ್ಸ್ಕೂಲ್ ವಿದ್ಯಾರ್ಥಿ ಆತ್ರೇಯ ದ್ವಿತೀಯ ಶ್ರೇಣಿ ಹಾಗೂ ಮಂಗಳೂರಿನ ವಳಚ್ಚಿಲ್ ನ ಎಕ್ಸ್ ಪರ್ಟ್ ಕಾಲೇಜಿನ ಶಾಪಲ್ ಶೆಟ್ಟಿ ಮೂರನೇ ಶ್ರೇಣಿ ಗಳಿಸಿದ್ದಾರೆ ಎಂದು ಹೇಳಿದರು.ಇನ್ನು ಡಿ ಪಾರ್ಮ್ ವಿಭಾಗದಲ್ಲಿ ಆತ್ರೆಯಾ ವೆಂಕಟಚಲಂ ಪ್ರಥಮ ಸ್ಥಾನ, ಭವೇಶ್ ಜಯಂತಿ ದ್ವಿತೀಯ ಸ್ಥಾನ, ಹರೀಶ್ ರಾಜ್ ತೃತೀಯ ಸ್ಥಾನ ಪಡೆದಿದ್ದಾರೆ. ವೆಟರ್ನರಿ ಪ್ರಾಕ್ಟಿಕಲ್ ವಿಭಾಗದಲ್ಲಿ ರಕ್ಷಿತಾ.ವಿ.ಪಿ ಪ್ರಥಮ ಶ್ರೇಣಿ, ನಂದನ್ ದ್ವಿತೀಯ ಶ್ರೇಣಿ ಹಾಗೂ ಭುವನೇಶ್ವರಿ ತೃತೀಯ ಶ್ರೇಣಿ ಗಳಿಸಿದ್ದಾರೆ ಎಂದು ತಿಳಿಸಿದರು.