ವಿಜಯಪುರದಲ್ಲಿ ಕೆನರಾ ಬ್ಯಾಂಕ್ ದರೋಡೆ – ಮನಗೂಳಿ ಶಾಖೆಯಿಂದ ಲಕ್ಷಾಂತರದ ಚಿನ್ನಾಭರಣ ಕಳ್ಳತನ

ವಿಜಯಪುರ: ಬಸವನಬಾಗೇವಾಡಿ ತಾಲೂಕಿನ ಮನಗಳಿ ಪಟ್ಟಣದಲ್ಲಿನ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದೆ. ಬ್ಯಾಂಕ್ ಬಾಗಿಲಿನ ಕೀ ಮುರಿದು ಹಾಗೂ ಕಿಟಕಿ ಸರಳು ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಶನಿವಾರ (ಮೇ.24) ತಡರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶನಿವಾರ ಮತ್ತು ಭಾನುವಾರ ಎರಡು ದಿನ ರಜೆ ಇದ್ದ ಹಿನ್ನೆಲೆಯಲ್ಲಿ ಸಿಬ್ಬಂದಿ ಬ್ಯಾಂಕ್ಗೆ ಬಂದಿಲ್ಲ.

ಇನ್ನು, ಬ್ಯಾಂಕ್ ಕಳ್ಳತನವಾದ ಸುದ್ದಿ ತಿಳಿದು, ಸಿಬ್ಬಂದಿ, ಮನಗೂಳಿ ಠಾಣೆ ಪೊಲೀಸರು ಮತ್ತು ಶ್ವಾನದಳ ಸ್ಥಳಕ್ಕೆ ಆಗಮಿಸಿದೆ. ಶ್ವಾನದಳ ಹಾಗೂ ಪೋಲಿಸರು ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಎಎಸ್ಪಿ ರಾಮನಗೌಡ ಹಟ್ಟಿ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ.