Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹಾಸನದಲ್ಲಿ ಯುವತಿಯ ಹೃದಯಾಘಾತದಿಂದ ಸಾವು: ಕೇವಲ 21ರ ಹರೆಯದಲ್ಲಿ ವಿಧಿಯ ಕ್ರೂರ ಆಟ

Spread the love

ಹಾಸನ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಲ್ಲಿ ಹಾರ್ಟ್‌ ಅಟ್ಯಾಕ್‌ ಪ್ರಾಬ್ಲಂಗಳು ಹೆಚ್ಚಾಗುತ್ತಿದೆ. ಇದೀಗ ಹಾಸನದಲ್ಲಿ ವಿದ್ಯಾರ್ಥಿನಿಯೊಬ್ಬಳು ಹಾರ್ಟ್‌ ಅಟ್ಯಾಕ್‌ನಿಂದ ಮೃತಪಟ್ಟಿದ್ದಾಳೆ. ಈ ಘಟನೆ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕವನ ಕೆ.ವಿ (21) ಎಂದು ಗುರುತಿಸಲಾಗಿದ್ದು, ಈಕೆ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ.

ಈಗಾಗಲೇ ಮೂರು ವಿಷಯಗಳ ಪರೀಕ್ಷೆ ಬರೆದಿದ್ದ ಕವನ ಇನ್ನೂ ಮೂರು ಪರೀಕ್ಷೆಗಳನ್ನು ಬರೆಯಬೇಕಿತ್ತು. ಸಂಜೆಯ ವೇಳೆ ಮನೆಯಲ್ಲಿ ಕವನಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ಕವನ ತಾಯಿ ಬಳಿ ಕುಡಿಯಲು ನೀರು ಕೇಳಿದ್ದಾಳೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಕುಸಿದು ಬಿದ್ದಿದ್ದಾಳೆ.

ಇತ್ತ ಮಗಳನ್ನು ಕೂಡಲೇ ಪೋಷಕರು ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲಾಗಲೇ ಕವನ ಕೊನೆಯುಸಿರೆಳೆದಿದ್ದಳು. ಸದ್ಯ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.


Spread the love
Share:

administrator

Leave a Reply

Your email address will not be published. Required fields are marked *