Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಕ್ರಮ ದಂಧೆಗೆ ಬಲಿಯಾದ ಪದವೀಧರರು: ಬೆಂಗಳೂರು ಸಿಸಿಬಿ ಪೊಲೀಸರಿಂದ ಎರಡು ತಂಡಗಳ ಬಂಧನ

Spread the love

ಬೆಂಗಳೂರು- ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಕೇರಳ ಮೂಲದ ಇಬ್ಬರು ಪದವೀಧರರನ್ನು ಬಂಧಿಸಿ 13 ಲಕ್ಷ ರೂ. ಮೌಲ್ಯದ ಗಾಂಜಾ ಹಾಗೂ ಹೈಡ್ರೋ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಸಂಪಿಗೆಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಇಬ್ಬರು ವ್ಯಕ್ತಿಗಳು ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ. ತಕ್ಷಣ ಸಿಸಿಬಿ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿ ಮತ್ತು ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡು ಸ್ಥಳದ ಮೇಲೆ ದಾಳಿ ಮಾಡಿ ಇಬ್ಬರು ಬಿಬಿಎ ಪದವೀಧರರನ್ನು ಬಂಧಿಸಿದ್ದಾರೆ.

ಈ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದಾಗ, ಮೋಜಿನ ಜೀವನ ಮತ್ತು ಅಕ್ರಮ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕೇರಳದ ಅಪರಿಚಿತ ವ್ಯಕ್ತಿಗಳಿಂದ ಗಾಂಜಾ ಮತ್ತು ಹೈಡ್ರೋ ಗಾಂಜಾವನ್ನು ಕಡಿಮೆ ಬೆಲೆಗೆ ಖರೀದಿಸಿ ನಗರಕ್ಕೆ ತಂದು ಹೆಚ್ಚಿನ ಬೆಲೆಗೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದುದಾಗಿ ಹೇಳಿದ್ದಾರೆ.

ಆರೋಪಿಗಳಿಂದ 1 ಕೆಜಿ 200 ಗ್ರಾಂ ಗಾಂಜಾ, 220 ಗ್ರಾಂ ಹೈಡ್ರೋ ಗಾಂಜಾ, 1 ತೂಕದ ಯಂತ್ರ, 2 ಐಫೋನ್‌ ಗಳನ್ನು ವಶಪಡಿಸಿಕೊಂಡಿದ್ದು ಇವುಗಳ ಒಟ್ಟು ಮೌಲ್ಯ 13 ಲಕ್ಷ ರೂ. ಗಳೆಂದು ಅಂದಾಜಿಸಲಾಗಿದೆ.ಇಬ್ಬರ ಬಂಧನ: ಕಾಲೇಜೊಂದರ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ1.38 ಲಕ್ಷ ರೂ. ಮೌಲ್ಯದ ಗಾಂಜಾ ಹಾಗೂ ಎಂಡಿಎಂಎ ಕ್ರಿಸ್ಟೇಲ್‌ ವಶಪಡಿಸಿಕೊಂಡಿದ್ದಾರೆ.

ಬ್ಯಾಡರಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿರುವ ಈಸ್ಟ್‌-ವೆಸ್ಟ್‌ ಕಾಲೇಜು ಬಳಿ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.ಬ್ಯಾಡರಹಳ್ಳಿ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡ ಸಿಸಿಬಿ ಪೊಲೀಸರು ಸ್ಥಳದ ಮೇಲೆ ದಾಳಿ ಮಾಡಿ ಇಬ್ಬರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ನಗರದ ಇಬ್ಬರು ಆರೋಪಿಗಳು ಮಂಡ್ಯ ಜಿಲ್ಲೆ ಬೆಳ್ಳೂರು ಕ್ರಾಸ್‌‍ ಬಳಿ ಅಪರಿಚಿತರಿಂದ ಗಾಂಜಾ ಮತ್ತುಎಂಡಿಎಂಎ ಕ್ರಿಸ್ಟೇಲ್‌ಗಳನ್ನು ಕಡಿಮೆ ಬೆಲೆಗೆ ಖರೀದಿ ಮಾಡಿಕೊಂಡು ಬಂದು ನಗರದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುವುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.ಆರೋಪಿಗಳಿಂದ 1ಕೆಜಿ 940 ಗಾಂಜಾ, 13.5 ಗ್ರಾಂ ಎಂಡಿಎಂಎ ಕ್ರಿಸ್ಟೇಲ್‌ ವಶಪಡಿಸಿಕೊಳ್ಳುವಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *