Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿನ್ನಸ್ವಾಮಿ ಕಾಲ್ತುಳಿತ: ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರದಿಂದ ₹10 ಲಕ್ಷ, RCB-ಕೆಎಸ್‌ಸಿಎದಿಂದ ₹5 ಲಕ್ಷ ಪರಿಹಾರ

Spread the love

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟ 11 ಮಂದಿಯ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 10 ಲಕ್ಷ ಪರಿಹಾರ ಘೋಷಿಸಿತ್ತು. ಇದೀಗ ಆರ್‌ಸಿಬಿ ಪ್ರಾಂಚೈಸಿ ಹಾಗೂ ಕೆಎಸ್‌ಸಿಎ ವತಿಯಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಲಾಗಿದೆ.

ಕಾಲ್ತುಳಿತ ದುರಂತದಲ್ಲಿ ಭೂಮಿಕ್‌ (21), ಸಹನಾ, ಪೂರ್ಣಚಂದ್ರ, ದಿವ್ಯಾಂಶಿ(13) , ದಿವ್ಯಾ(26), ದೇವಿ, ಶಿವು(17), ಶರವಣ(21), ಮನೋಜ್‌ ಸೇರಿ 11 ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಇವರ ಕುಟುಂಬಗಳಿಗೆ ಪರಿಹಾರ ಘೋಷಣೆಯಾಗಿದೆ.

ಈ ಬಗ್ಗೆ ಆರ್‌ಸಿಬಿ-ಕೆಎಸ್‌ಸಿಎ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ದುರ್ಘಟನೆಗೆ ತೀವ್ರ ಸಂತಾಪ ಸೂಚಿಸುತ್ತೇವೆ. ಈ ದುಃಖದ ಸಂದರ್ಭದಲ್ಲಿ ನಾವು ಮೃತರ ಕುಟುಂಬಗಳೊಂದಿಗೆ ಇರುತ್ತೇವೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿವೆ.

ಚಿನ್ನಸ್ವಾಮಿ ಸ್ಟೇಡಿಯಂ ದುರಂತದ ಮ್ಯಾಜಿಸ್ಟ್ರಿಯಲ್‌ ತನಿಖೆಗೆ ಸಿಎಂ ಆದೇಶ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11 ಜನರು ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರ ಕುಟುಂಬದವರಿಗೆ 10 ಲಕ್ಷ ರೂ. ಪರಿಹಾರವಾಗಿ ನೀಡಲಿದ್ದೇವೆ. ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಇನ್ನು ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ (Chinnaswamy Stadium Stampede) ಆದೇಶಿಸಿದ್ದೇವೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರದ ಕಾವೇರಿ ನಿವಾಸದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರ ವಾರಸುದಾರರಿಗೆ 10 ಲಕ್ಷ ರೂ. ಪರಿಹಾರವಾಗಿ ನೀಡಲಿದ್ದೇವೆ. ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿರುವುದಾಗಿ ಹೇಳಿದ್ದಾರೆ.

ಈ ದುರಂತದ ಬಗ್ಗೆ ಮ್ಯಾಜಿಸ್ಟ್ರಿಯಲ್ ತನಿಖೆಗೆ ಆದೇಶಿಸಿದ್ದೇವೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15 ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ. ನೆನ್ನೆ ತಡರಾತ್ರಿವರೆಗೂ ಐಪಿಎಲ್ ಫೈನಲ್ ಪಂದ್ಯ ನಡೆದಿತ್ತು. ಕ್ರಿಕೆಟ್ ಅಸೋಸಿಯೇಶನ್ ಅವರು ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದಲೂ ಕಾರ್ಯಕ್ರಮ ಆಯೋಜಿಸಲಾಗಿತ್ತು.

ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು. ಸರ್ಕಾರ ಇದಕ್ಕಾಗಿ ಬಹಳ ದುಃಖ ವ್ಯಕ್ತಪಡಿಸುತ್ತದೆ. ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ವಿಧಾನಸೌಧ ಎದುರು ನಡೆದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ.ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ.

ಯಾರೂ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ. ಸ್ಟೇಡಿಯಂ ಸಾಮರ್ಥ್ಯದಷ್ಟು ಜನರ ನಿರೀಕ್ಷೆಯಿತ್ತು. ಗಾಯಗೊಂಡವರಿಗೆ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ನೆರವು ಸರ್ಕಾರ ಒದಗಿಸಲಿದೆ. ಈ ವಿಷಯದಲ್ಲಿ ರಾಜಕೀಯ ನಡೆಸುವುದು ಸರಿಯಲ್ಲ. ಈ ದುರಂತ ನಡೆಯಬಾರದಿತ್ತು. ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ಅತ್ಯಂತ ಹೆಚ್ಚಿನ ದುಃಖ ವ್ಯಕ್ತಪಡಿಸುತ್ತದೆ ಎಂದು ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗ, ವಾರೀಸುದಾರರಿಗೆ, ಪೋಷಕರಿಗೆ ಸಾವಿನ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದರು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love
Share:

administrator

Leave a Reply

Your email address will not be published. Required fields are marked *