Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿನ್ನಸ್ವಾಮಿ ದುರಂತ: ಹೈಕೋರ್ಟ್ ಸ್ವಯಂಪ್ರೇರಿತ ದೂರು, ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚನೆ

Spread the love

ಬೆಂಗಳೂರು: ಆರ್ ಸಿಬಿ ವಿಜಯೋತ್ಸವದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಹಾಗೂ ಹಲವರು ಗಾಯಗೊಂಡಿರುವ ದುರಂತದ ಬೆನ್ನಲ್ಲೇ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ.

ಇದೇ ವೇಳೆ ಹೈಕೋರ್ಟ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪವಾಗಿದೆ, ಹಲವರ ಸಾವು-ನೋವು ಸಂಭವಿಸಿದೆ. ಘಟನೆ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಇಂದು ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ನಿಗದಿಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.


Spread the love
Share:

administrator

Leave a Reply

Your email address will not be published. Required fields are marked *