Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಆರೋಗ್ಯ ಇಲಾಖೆಯಿಂದ ಹೊಸ ಆದೇಶ: ಆಶಾ ಮೆಂಟರ್‌ಗಳ ಕೆಲಸಕ್ಕೆ ಕುತ್ತು

Spread the love

Karnataka Health Dept Relieves 195 Contract Nurses from ASHA Mentor Roles

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ) ಅಡಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ 195 ಆಶಾ ಕಾರ್ಯಕರ್ತೆಯರ ಮಾರ್ಗದರ್ಶಕರನ್ನು ಕರ್ತವ್ಯದಿಂದ ಮುಕ್ತಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ

ಶುಶ್ರೂಷಕ ಅರ್ಹತೆಯುಳ್ಳ ಆಶಾ ಮೆಂಟರ್‌ಗಳು ನಿರ್ವಹಿಸುತ್ತಿದ್ದ ಜವಾಬ್ದಾರಿಗಳನ್ನು ಇನ್ನು ಮುಂದೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಲ್ಲಿನ ಮಹಿಳಾ ಆರೋಗ್ಯ ಸಂದರ್ಶಕರು, ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು ಹಾಗೂ ಉಪಕೇಂದ್ರಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಹಾಗೂ ಸಮುದಾಯ ಆರೋಗ್ಯ ಅಧಿಕಾರಿಗಳು ನಿರ್ವಹಿಸುವಂತೆ ಆದೇಶದಲ್ಲಿ ತಿಳಿಸಿದೆ.

ಈ ಮೂಲಕ 195 ಆಶಾ ಮೆಂಟರ್‌ಗಳ ಕೆಲಸಕ್ಕೆ ಕುತ್ತು ಬಂದಿದೆ. ಕರ್ತವ್ಯದಿಂದ ಮುಕ್ತಗೊಂಡಿರುವ ಈ 195 ಮಂದಿಯನ್ನು ಅರ್ಹರಿದ್ದಲ್ಲಿ ಆಯಾ ಜಿಲ್ಲೆಗಳಲ್ಲಿ ಎನ್‌ಎಚ್‌ಎಂ ಅಡಿ ಖಾಲಿ ಇರುವ ಶುಶ್ರೂಷಕರ ಹುದ್ದೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಆದ್ಯತೆ ಮೇರೆಗೆ ನೇಮಿಸಲು ಪರಿಗಣಿಸಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ) ಅಡಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ 195 ಆಶಾ ಕಾರ್ಯಕರ್ತೆಯರ ಮಾರ್ಗದರ್ಶಕರನ್ನು ಕರ್ತವ್ಯದಿಂದ ಮುಕ್ತಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.


Spread the love
Share:

administrator

Leave a Reply

Your email address will not be published. Required fields are marked *