Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಟಾಕ್ಸಿಕ್ ಚಿತ್ರೀಕರಣ ಮುಂಬೈಗೆ ಶಿಫ್ಟ್: ಕಿಯಾರ ಅಡ್ವಾಣಿಗಾಗಿ ಯಶ್ ದೊಡ್ಡ ನಿರ್ಧಾರ

Spread the love

Yash reveals his reason for doing Toxic says I m somebody who will risk it  all and

ಮುಂಬೈ: ರಾಕಿಂಗ್ ಸ್ಟಾರ್ ಯಶ್ ನಾಯಕರಾಗಿರುವ ಟಾಕ್ಸಿಕ್ ಸಿನಿಮಾದಲ್ಲಿ ಬಾಲಿವುಡ್ ನಟಿ ಕಿಯಾರ ಅಡ್ವಾಣಿ ನಾಯಕಿಯಾಗಿರುವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಕಿಯಾರಗಾಗಿ ಯಶ್ ದೊಡ್ಡ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ಆಕ್ಷನ್ ಕಟ್ ಹೇಳುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಟಾಕ್ಸಿಕ್.

ಈ ಸಿನಿಮಾ ಕೆಜಿಎಫ್ 2 ಬಳಿಕ ಯಶ್ ನಟಿಸುತ್ತಿರುವ ಸಿನಿಮಾವಾಗಿದೆ. ಬಹುಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ದೊಡ್ಡ ತಾರಾಗಣವೇ ಸಿನಿಮಾದಲ್ಲಿದೆ.

ಈ ನಡುವೆ ಟಾಕ್ಸಿಕ್ ಚಿತ್ರೀಕರಣ ಹಂತದಲ್ಲಿರುವಾಗಲೇ ನಾಯಕಿ ಕಿಯಾರ ಅಡ್ವಾಣಿ ಗರ್ಭಿಣಿಯಾಗಿದ್ದಾರೆ. ಇದರಿಂದಾಗಿ ಚಿತ್ರತಂಡ ಅವರನ್ನು ಎಚ್ಚರಿಕೆಯಿಂದ ನೋಡಿಕೊಳ್ಳುತ್ತಿದೆ. ಎಷ್ಟರಮಟ್ಟಿಗೆ ಎಂದರೆ ಕಿಯಾರಗಾಗಿ ನಟ ಯಶ್ ಚಿತ್ರತಂಡದ ಬಳಿ ಮನವಿ ಮಾಡಿ ಚಿತ್ರೀಕರಣವನ್ನೇ ಮುಂಬೈಗೆ ಶಿಫ್ಟ್ ಮಾಡಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಬೆಂಗಳೂರಿನಲ್ಲಿ ನಡೆಯಬೇಕಿದ್ದ ಚಿತ್ರೀಕರಣವನ್ನೂ ಯಶ್ ಮುಂಬೈಗೆ ಸ್ಥಳಾಂತರಿಸಿದ್ದಾರೆ ಎನ್ನಲಾಗುತ್ತಿದೆ. ಗರ್ಭಿಣಿ ಕಿಯಾರಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಯಶ್ ದೊಡ್ಡ ನಿರ್ಧಾರ ಕೈಗೊಂಡಿದ್ದಾರೆ ಎಂದು ಸುದ್ದಿಯಾಗಿದೆ.


Spread the love
Share:

administrator

Leave a Reply

Your email address will not be published. Required fields are marked *