Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಜ್ಯದಲ್ಲಿ ಒಂದೇ ವರ್ಷದಲ್ಲಿ 29,000 ಬಾಲ್ಯ ವಿವಾಹಗಳು – ಮಹಿಳಾ ಆಯೋಗದ ಅಧ್ಯಕ್ಷರಿಂದ ಕಳವಳ

Spread the love

ಮೈಸೂರು: ಬಾಲ್ಯವಿವಾಹ ತಡೆಯುವ ನಿಟ್ಟಿನಲ್ಲಿ ಸರಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದರೂ, ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ಪರಿಣಾಮ ಒಂದೇ ವರ್ಷದಲ್ಲಿ ರಾಜ್ಯದಲ್ಲಿ 29 ಸಾವಿರ ಬಾಲ್ಯ ವಿವಾಹಗಳು ನಡೆದಿರುವುದು ಬೆಳಕಿಗೆ ಬಂದಿದೆ ಎಂಬ ಬಗ್ಗೆ ಸ್ವತಃ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರೇ ಕಳವಳ ವ್ಯಕ್ತಪಡಿಸಿದ್ದಾರೆ.

ನಗರದ ಸೇಠ್ ಮೋಹನ್‌ ತುಳಸಿದಾಸ್‌ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾ| ನಾಗಲಕ್ಷ್ಮೀ ಚೌಧರಿ, ಹೆಣ್ಣುಮಕ್ಕಳು ಹದಿ ಹರೆಯದಲ್ಲೇ ಪ್ರೀತಿ ಪ್ರೇಮಕ್ಕೆ ಸಿಲುಕುತ್ತಿರುವುದರಿಂದ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.


Spread the love
Share:

administrator

Leave a Reply

Your email address will not be published. Required fields are marked *