ಪರಿಸರ ಸಂರಕ್ಷಣೆಗೆ ಕಠಿಣ ಕ್ರಮ – ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ, ಬಳಕೆ ಸಂಪೂರ್ಣ ನಿಷೇಧ!

ಬಳ್ಳಾರಿ: ಸಮಾಜದಲ್ಲಿ ಪ್ಲಾಸ್ಟಿಕ್ ನಿಷೇಧ ಚರ್ಚೆ ಬಹಳ ವರ್ಷದಿಂದಲೂ ಚರ್ಚೆ ಆಗುತ್ತಯಿದೆ. ಪರಿಸರಕ್ಕೆ ಕಂಟಕವಾಗಿರೋ ಪ್ಲಾಸ್ಟಿಕ್ ನಿಗ್ರಹಕ್ಕೆ ಸರ್ಕಾರ ಕೂಡ ಅನೇಕ ತೀರ್ಮಾನ ಕೈಗೊಂಡಿದೆ
ಈ ನಡುವೆ ಗಣಿನಾಡು ಬಳ್ಳಾರಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಸಂಗ್ರಹಣೆ ಹಾಗೂ ವಿತರಣೆ ಹಾಗೂ ಬಳಕೆ ನಿಷೇಧಿಸಲಾಗಿದೆ.
ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಇಓ, ರಸ್ತೆಗಳಲ್ಲಿ ಮತ್ತು ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸದ ರಾಶಿಗಳು, ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಪರಿಸರ ಹಾಗೂ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಮುಖ್ಯಮಂತ್ರಿಗಳು ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಪರಿಸರ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 5 ರಡಿ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳು 2016, 2021 ರ ತಿದ್ದುಪಡಿ ಅನ್ವಯ ಕ್ಯಾರಿ ಬ್ಯಾಗ್ ಇತ್ಯಾದಿಗಳಲ್ಲಿ 120 ಮೈಕ್ರಾನ್ ಗಿಂತ ಕಡಿಮೆ ಗಾತ್ರದ ಎಲ್ಲಾ ಕೆಲವು ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಸಂಗ್ರಹಣೆ, ವಿತರಣೆ ಹಾಗೂ ಬಳಕೆಯನ್ನು ಎಲ್ಲೆಡೆ ನಿಷೇಧಿಸಲಾಗಿದೆ ಎಂದಿದ್ದಾರೆ.