Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಿನ್ನದ ಬೆಲೆ ಸ್ಥಿರ—ಆರ್ಥಿಕ ಅಸ್ಥಿರತೆ ನಡುವೆಯೂ ಮಾರುಕಟ್ಟೆಯಲ್ಲಿ ಸಮತೋಲನ

Spread the love

ಇತ್ತೀಚೆಗೆ ಜಾಗತಿಕ ಮಾರುಕಟ್ಟೆಯಲ್ಲಿ ಕಂಡುಬಂದ ರಾಜಕೀಯ ಉದ್ವಿಗ್ನತೆ ಮತ್ತು ಬಂಡವಾಳ ಹೂಡಿಕೆದಾರರಲ್ಲಿ ಆತಂಕದ ಕಾರಣದಿಂದಾಗಿ ಚಿನ್ನದ ಬೆಲೆಗಳಲ್ಲಿ ಕೆಲ ದಿನಗಳ ಇಳಿಕೆ ಕಂಡುಬಂದಿತ್ತು. ಆದರೆ ಜೂನ್ 26ರಂದು, ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸ್ಥಿರವಾಗಿದೆ.

ಇಂದು 24 ಕ್ಯಾರಟ್ ಶುದ್ಧ ಚಿನ್ನದ ದರ ಪ್ರತಿ 10 ಗ್ರಾಂಗೆ ₹98,950 ರೂಪಾಯಿಗೆ ಸ್ಥಿರವಾಗಿದೆ. ಹೂಡಿಕೆದಾರರ ಹಿತಾಸಕ್ತಿಗೆ ಅನುಗುಣವಾಗಿ ಮಾರುಕಟ್ಟೆ ಈಗ ತಾತ್ಕಾಲಿಕ ಸಮತೋಲನವನ್ನು ತಲುಪಿರುವ ಲಕ್ಷಣಗಳು ಕಾಣಿಸುತ್ತಿವೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಮೆರಿಕದ ಬಡ್ಡಿದರ ನೀತಿ, ಡಾಲರ್ ಮೌಲ್ಯದ ಬಲವರ್ಧನೆ ಮತ್ತು ಮಧ್ಯಪ್ರಾಚ್ಯದ ರಾಜಕೀಯ ತೀವ್ರತೆಗಳು ಚಿನ್ನದ ಬೆಲೆ ಮೇಲೆ ಪ್ರಭಾವ ಬೀರುತ್ತಿವೆ. ಇತ್ತೀಚಿನ ಇಸ್ರೇಲ್-ಇರಾನ್ ಸಮಯೀಕ ನಿಲವಣಿಯಿಂದ ಬೆಲೆ ಇಳಿದರೂ, ಮುಂದಿನ ದಿನಗಳಲ್ಲಿ ಉದ್ವಿಗ್ನತೆ ಮತ್ತೆ ಬೆಳವಣಿಗೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಮರು ಏರಿಕೆಯ ನಿರೀಕ್ಷೆಯಿದೆ. ವಿಶ್ಲೇಷಕರು ಇದರ ಬಗ್ಗೆಯೂ ಎಚ್ಚರಿಕೆ ನೀಡುತ್ತಾ, ಹೂಡಿಕೆದಾರರು ಚಿನ್ನ ಖರೀದಿಯಲ್ಲಿ ಯುಕ್ತಿಮತ್ತೆಯಿಂದ ನಡೆದುಕೊಳ್ಳಬೇಕು ಎಂದು ಸಲಹೆ ನೀಡುತ್ತಿದ್ದಾರೆ.

ಈ ಬೆಲೆಗಳು ಒಂದೊಂದು ಪ್ರಮುಖ ನಗರದಲ್ಲೂ ಒಂದೊಂದು ರೀತಿಯಲ್ಲಿದೆ. ಅಂದ್ರೆ ಭಾರತದ ಪ್ರಮುಖ ನಗರಗಳಾದ ಚೆನ್ನೈ, ಬೆಂಗಳೂರು, ಹೈದರಾಬಾದ್, ಕೋಲ್ಕತ್ತಾ, ಮುಂಬೈ, ದೆಹಲಿ, ಪುಣೆ, ಅಹಮದಾಬಾದ್ ಸೇರಿ ಹಲವೆಡೆ ಬೇರೆ ಬೇರೆ ಬೆಲೆ ಇದೆ. ಹಾಗಾದರೆ ಇಂದು ಭಾರತದಲ್ಲಿ ಚಿನ್ನದ ಬೆಲೆ ಎಷ್ಟಿದೆ. ಯಾವ್ಯಾವ ನಗರದಲ್ಲಿ ಬೆಲೆ ಎಷ್ಟಿದೆ ಎಂದು ಇಲ್ಲಿ ತಿಳಿಯಿರಿ.

ಭಾರತದಲ್ಲಿ ಇಂದಿನ ಚಿನ್ನದ ಬೆಲೆ:

24 ಕ್ಯಾರಟ್‌ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 24 ಕ್ಯಾರಟ್‌ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 24 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 9,895 ರೂ. ಇತ್ತು. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 98,950 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9,89,500 ರೂ. ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಇದೆ.

22 ಕ್ಯಾರಟ್‌ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 22 ಕ್ಯಾರಟ್‌ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 22 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 9,070 ರೂ. ಇತ್ತು. 22 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 90,700 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 9,07,000 ರೂ. ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಅಷ್ಟೇ ಇದೆ.

18 ಕ್ಯಾರಟ್‌ ಚಿನ್ನದ ಬೆಲೆ:

ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು, 18 ಕ್ಯಾರಟ್‌ ಚಿನ್ನದ ಬೆಲೆ ಇಳಿಕೆಯೂ ಆಗಿಲ್ಲ ಏರಿಕೆಯೂ ಆಗಿಲ್ಲ. ಬೆಲೆಯು ನಿನ್ನೆಯಷ್ಟೇ ಕಾಯ್ದುಕೊಂಡಿದೆ. ನಿನ್ನೆ 18 ಕ್ಯಾರಟ್‌ನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,421 ರೂ. ಇತ್ತು. 24 ಕ್ಯಾರಟ್‌ನ ಚಿನ್ನದ ಬೆಲೆ 10 ಗ್ರಾಂಗೆ 74,210 ರೂ. ಇತ್ತು. ಹಾಗೆಯೇ 22 ಕ್ಯಾರಟ್‌ನ ಚಿನ್ನದ ಬೆಲೆ 100 ಗ್ರಾಂಗೆ 7,42,100 ರೂ. ಆಗಿತ್ತು. ಈ ಬೆಲೆ ನಿನ್ನೆಯಂತೆಯೇ ಇಂದು ಕೂಡ ಇದೆ.

ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)

ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,895 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,070 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,475 ಆಗಿದೆ.

ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,895 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,070 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,421 ಆಗಿದೆ.

ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,910 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,085 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,434 ಆಗಿದೆ.

ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,895 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,070 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,421 ಆಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,895 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,070 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,421 ಆಗಿದೆ.

ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,895 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,070 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,421 ಆಗಿದೆ.

ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,895 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,070 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,421 ಆಗಿದೆ.

ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,895 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,070 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,421 ಆಗಿದೆ.

ವಡೋದರಾ: ವಡೋದರಾದಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,900 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,075 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,425 ಆಗಿದೆ.

ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 24 ಕ್ಯಾರಟ್ ಚಿನ್ನದ ಬೆಲೆ ₹9,900 ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ ₹9,075 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,425 ಆಗಿದೆ.

ಭಾರತದಲ್ಲಿ ಇಂದು ಬೆಳ್ಳಿ ಬೆಲೆ:

ಇನ್ನು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲೂ ಯಾವುದೇ ಇಳಿಕೆಯಾಗಲಿ, ಏರಿಕೆಯಾಗಲೀ ಆಗಿಲ್ಲ. ಅಂದರೆ ಪ್ರತಿ ಗ್ರಾಂ ಬೆಳ್ಳಿಗೆ ₹108 ಇದೆ. ಪ್ರತಿ ಹತ್ತು ಗ್ರಾಂ ಬೆಳ್ಳಿ ಬೆಲೆಗೆ ₹1,080 ಆಗಿದೆ. ಹಾಗೆಯೇ ಪ್ರತಿ 100 ಗ್ರಾಂ ಬೆಳ್ಳಿಗೆ ₹10,800 ಆಗಿದ್ದು, ಒಂದು ಕೆ.ಜಿ ಬೆಳ್ಳಿಗೆ ₹1,08,000 ಆಗಿದೆ. ಬೆಳ್ಳಿ ಬೆಲೆಯಲ್ಲೂ ಯಾವುದೇ ಬದಲಾವಣೆಯಾಗಿಲ್ಲ.

ಸ್ಪಾಟ್ ಗೋಲ್ಡ್ ವಿವರ:

ರಾಯಿಟರ್ಸ್ ನೀಡಿರುವ ವರದಿಯ ಪ್ರಕಾರ ಜಾಗತಿಕ ಮಾರುಕಟ್ಟೆಯಲ್ಲಿ ಸ್ಪಾಟ್‌ಗೋಲ್ಡ್ ಬೆಲೆ ಇಂದು 0.1% ಹೆಚ್ಚಾಗಿ $2,334.20 ಪ್ರತಿ ಔನ್ಸ್ ಆಗಿದೆ. ಡಾಲರ್ ಮೌಲ್ಯದಲ್ಲಿ ಸ್ವಲ್ಪ ಕುಸಿತ ಮತ್ತು ಜಾಗತಿಕ ರಾಜಕೀಯ ಉದ್ವಿಗ್ನತೆಗಳಿಂದಾಗಿ ಚಿನ್ನದ ಬೇಡಿಕೆಗೆ ಬಲ ಸಿಕ್ಕಿದೆ.

ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?

ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.

ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು.

ಹೂಡಿಕೆಗೆ ಆಸಕ್ತರಾಗಿರುವವರಿಗೆ ಈ ಪರಿಸ್ಥಿತಿ ಎರಡು ಬಗೆಯ ಪ್ರಭಾವ ಬೀರಬಹುದು.ಹೀಗಾಗಿ ಒಂದೆಡೆ ಬೆಲೆ ಇನ್ನಷ್ಟು ಏರಬಹುದು ಎಂಬ ನಿರೀಕ್ಷೆಯಿಂದ ಈಗಲೇ ಹೂಡಿಕೆ ಮಾಡೋದು ಸೂಕ್ತವೆಂಬ ಯೋಚನೆ,ಮತ್ತೊಂದೆಡೆ ಈಗ ತಕ್ಷಣ ಹೂಡಿಕೆಗೆ ಮುನ್ನುಡಿಯಿಟ್ಟರೆ ನಷ್ಟವೋ ಎಂಬ ಆತಂಕ.ಅಂತಾರಾಷ್ಟ್ರೀಯ ಮಾರುಕಟ್ಟೆಯ ಒತ್ತಡ,ಜಿಯೋಪಾಲಿಟಿಕಲ್ ಅನಿಶ್ಚಿತತೆಗಳು ಹಾಗೂ ರೂಪಾಯಿಯ ಮೌಲ್ಯ ಕುಸಿತ ಈ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿ ಗುರುತಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *