Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ: ಹಣಕಾಸಿನ ವಿವಾದಕ್ಕೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ!

Spread the love

ಬೆಂಗಳೂರು : ಹಣಕಾಸಿನ ವಿಚಾರಕ್ಕೆ ಸಂಬಂಧಿಗಳ ಮಧ್ಯೆ ಕಿರಿಕ್ , ಕಿಡಿಗೇಡಿಯೊಬ್ಬ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಜುಲೈ 1 ರಂದು ಸಂಜೆ ಈ ಘಟನೆ ನಡೆದಿದ್ದು, ಬೆಂಗಳೂರಿನ ವಿವೇಕನಗರದಲ್ಲಿ ಸುಬ್ರಹ್ಮಣಿ ಎಂಬಾತ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾನೆ.

ಮನೆಗೆ ಬೆಂಕಿ ಹಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವೆಂಕಟರಮಣಿ ಎಂಬವರ ಬಳಿ ಆರೋಪಿಯ ಸಹೋದರಿ ತನ್ನ ಮಗಳ ಮದುವೆಗಾಗಿ, 5 ಲಕ್ಷ ರೂ. ಹಣ ಪಡೆದಿದ್ದಳು. ಹಣ ಪಡೆದು ಹಲವು ವರ್ಷಗಳಾದರೂ ಹಣ ವಾಪಸ್ ನೀಡಿರಲಿಲ್ಲ. ಹೀಗಾಗಿ ಸುಬ್ರಹ್ಮಣಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಸಂಬಂಧ ವೆಂಕಟರಮಣಿ ಪುತ್ರ ವಿವೇಕ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *