ಕಾಲೇಜು ಸಮೀಪದಲ್ಲೇ ಬೃಹತ್ ವೇಶ್ಯಾವಾಟಿಕೆ ಜಾಲ ಬಯಲು, 10ಕ್ಕೂ ಹೆಚ್ಚು ಮಹಿಳೆಯರ ರಕ್ಷಣೆ!

ಹುಬ್ಬಳ್ಳಿ: ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ ಠಾಣಾ ವ್ಯಾಪ್ತಿಯ ಪಾರಿಜಾತ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ಬೃಹತ್ ವೇಶ್ಯಾವಾಟಿಕೆ ಜಾಲವನ್ನು ಸಿಸಿಬಿ ಪೊಲೀಸರು, ಮೈಸೂರಿನ ಒಡನಾಡಿ ಸಂಸ್ಥೆಯ ಸಹಯೋಗದೊಂದಿಗೆ ಭೇದಿಸಿದ್ದಾರೆ. ಈ ದಾಳಿಯಲ್ಲಿ 10ಕ್ಕೂ ಹೆಚ್ಚು ಮಹಿಳೆಯರನ್ನು ರಕ್ಷಿಸಲಾಗಿದ್ದು, 7 ವಿಟ ಪುರುಷರನ್ನು ಬಂಧಿಸಲಾಗಿದೆ.

ಲಾಡ್ಜ್ ಮಾಲೀಕ ಪರಾರಿಯಾಗಿದ್ದು, ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನ ಬಂಧಿಸಿದ್ದಾರೆ.

ಕಾಲೇಜು ಪಕ್ಕದಲ್ಲೇ ದಂಧೆ!
ಈ ಕಾನೂನುಬಾಹಿರ ದಂಧೆಯು ಕಾಲೇಜುಗಳ ಸಮೀಪದಲ್ಲೇ ರಹಸ್ಯವಾಗಿ ನಡೆಯುತ್ತಿತ್ತು ಎಂಬುದು ತಿಳಿದು ಸ್ಥಳೀಯರೇ ಶಾಕ್ ಆಗಿದ್ದಾರೆ. ದಾಳಿಯ ಸಂದರ್ಭದಲ್ಲಿ, ಮಹಿಳೆಯರನ್ನು ಲಾಡ್ಜ್ನ ಬಾತ್ರೂಮ್ನಿಂದ ರಹಸ್ಯ ಕೋಣೆಗೆ ಕೊಂಡೊಯ್ಯಲಾಗಿತ್ತು. ಆದರೆ, ಸಿಸಿಬಿ ಪೊಲೀಸರು ರಹಸ್ಯ ಕೋಣೆಯ ಪ್ರವೇಶ ದ್ವಾರವನ್ನು ತೆರೆದು ಮಹಿಳೆಯರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಈ ಜಾಲವು ಸಂಘಟಿತ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದರ ಹಿಂದೆ ದೊಡ್ಡ ಮಾಫಿಯಾ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಈ ಜಾಲದ ಹಿಂದೆ ಯಾರಿದ್ದಾರೆ?
ಪ್ರಕರಣ ಸಂಬಂಧ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು, ಈ ಜಾಲದ ಹಿಂದಿನ ಮಾಸ್ಟರ್ಮೈಂಡ್ಗಳನ್ನು ಪತ್ತೆಹಚ್ಚಲು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸ್ಥಳೀಯರಲ್ಲಿ ಈ ಘಟನೆಯಿಂದ ಆತಂಕ ಮೂಡಿದ್ದು, ಶಿಕ್ಷಣ ಸಂಸ್ಥೆಗಳ ಸಮೀಪ ಇಂತಹ ದಂಧೆಗಳು ನಡೆಯುತ್ತಿರುವುದು ಗಂಭೀರ ಸಮಸ್ಯೆಯಾಗಿದೆ.
