Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರಿಗೆ ಮಾದಕ ವಸ್ತು ಸಾಗಾಟ: ಸಕಲೇಶಪುರದ ಯುವಕ ಪೊಲೀಸರ ವಶಕ್ಕೆ

Spread the love

ಮಂಗಳೂರು: ಮಂಗಳೂರಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಧ್ರುವ್ ಡಿ. ಶೆಟ್ಟಿ (22) ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚೆಗೆ ಮಂಗಳೂರು ಸೆನ್ ಠಾಣಾ ಪೊಲೀಸರು ಎನ್‌ಡಿಪಿಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿ 5 ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

ಇವರಿಗೆ ಮಾದಕ ವಸ್ತುವನ್ನು ಪೂರೈಸುತ್ತಿದ್ದ ಆರೋಪಿ ಧ್ರುವ್ ಶೆಟ್ಟಿಯನ್ನು ಮೈಸೂರಿನಲ್ಲಿ ರವಿವಾರ ಬಂಧಿಸಲಾಗಿದೆ. ಆರೋಪಿಯಿಂದ ಮೊಬೈಲ್, ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *