ಕರ್ನಾಟಕದ ಗುಂಡಿ ಬಿದ್ದ ರಸ್ತೆಗಳು: ‘ನಿಧಿ ಭಾಗ್ಯ’ ಟ್ರೋಲ್ ವೈರಲ್, ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ಜನ!

ಕರ್ನಾಟಕದಲ್ಲಿ ಅಭಿವೃದ್ಧಿಯೇ ಆಗುತ್ತಿಲ್ಲ ಎಂದು ಅನೇಕರ ಅಭಿಪ್ರಾಯ. ಆದರೆ ರಾಜ್ಯ ಸರ್ಕಾರ ಈ ಯಾವುದಕ್ಕೂ ತಲೆಕೆಡಿಸಿಕೊಳ್ಳುತ್ತಿಲ್ಲ. ಜನರಿಗೆ ಭಾಗ್ಯಗಳನ್ನು ನೀಡಿ, ರಾಜ್ಯದಲ್ಲಿ ಅಭಿವೃದ್ದಿಯ ಕಡೆಗೆ ಗಮನ ನೀಡುತ್ತಿಲ್ಲ ಎಂಬುದು ಅನೇಕರ ಆರೋಪ. ರಾಜ್ಯದಲ್ಲಿ ಮಳೆಯು ಪ್ರಾರಂಭವಾಗಿದ್ದು, ರಸ್ತೆಗಳು ಗುಂಡಿ ಬಿದ್ದಿದೆ.

ಅದರಲ್ಲೂ ಕರವಾಳಿ ಭಾಗದಲ್ಲಿ ಈ ಬಾರಿ ಹೆಚ್ಚು ಮಳೆಯಾಗಿದೆ. ಹೀಗಾಗಿ ಅಲ್ಲಿ ರಸ್ತೆಗಳು ಗುಂಡಿ ಬಿದ್ದು ಸಂಚಾರ ವ್ಯವಸ್ಥೆ ಅಪಾಯದಲ್ಲಿದೆ. ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಹೀಗಾಗಿ ರಸ್ತೆಗಳಲ್ಲಿ ಬಿದ್ದ ಹೊಂಡಗಳ ಬಗ್ಗೆ ಜನ ಟ್ರೋಲ್ ಮಾಡುತ್ತಿದ್ದಾರೆ. ಆದರೆ ಇಲ್ಲೊಂದು ತುಂಬಾ ಸ್ವಾರಸ್ಯಕರವಾದ ಪೋಸ್ಟ್ ಒಂದು ವೈರಲ್ ಆಗಿದೆ. ಈ ಪೋಸ್ಟ್ ಒಂದು ಕಡೆ ಸಾರ್ವಜನಿಕರನ್ನು ಎಚ್ಚರಿಸಿದರೆ, ಇನ್ನೊಂದು ಕಡೆ ಸರ್ಕಾರಕ್ಕೆ ಹಾಗೂ ಜನಪ್ರತಿನಿಧಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಮಂಗಳೂರಿನ ಕೈಕಂಬದಿಂದ (Kaikamba) ಕುಕ್ಕೆ ಸುಬ್ರಹ್ಮಣ್ಯಕ್ಕೆ
ವೈರಲ್ ಪೋಸ್ಟ್ಗೆ ಅನೇಕರು ತಮಾಷೆಯಾಗಿ ಕಾಮೆಂಟ್ ಮಾಡಿದ್ದಾರೆ. ಒಬ್ಬ ಬಳಕೆದಾರರು, ‘ROFL… ಇದನ್ನು ಮಾಡಿದವರಿಗೆ ಪ್ರಶಸ್ತಿ ಸಿಗಬೇಕು ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರ ಇನ್ನು ಕೆಜಿಎಫ್ನಲ್ಲಿ ಚಿನ್ನಕ್ಕಾಗಿ ಅಗೆಯುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರದಿಂದ ನಿಧಿ ಭಾಗ್ಯ ಸಿಕ್ಕಿದೆ ಎಂದು ಹೇಳಿದ್ದಾರೆ. ಇನ್ನು ಬೆಂಗಳೂರಿನ ವ್ಯಕ್ತಿಯೊಬ್ಬರು ಅದೇ ಜ್ಯೋತಿಷಿ ಬೆಂಗಳೂರಿನ ರಸ್ತೆಗಳ ಕೆಳಗೆ ನಿಧಿ ಇದೆ ಎಂದು ಭವಿಷ್ಯ ನುಡಿದಂತೆ ಕಾಣುತ್ತಿದೆ, ಹಾಗಾಗಿ ಇಲ್ಲಿಯೂ ಗುಂಡಿಗಳು ಬಿದ್ದಿದೆ ಎಂದು ಹೇಳಿದ್ದಾರೆ. ಇನ್ನು ಕೆಲವರು ಇಂತಹ ಪುಣ್ಯಸ್ಥಳಗಳಿಗೆ ಹೋಗುವ ರಸ್ತೆಗಳನ್ನು ಸರಿ ಮಾಡಬೇಕು ಎಂದು ಅನೇಕರು ಸಲಹೆ ನೀಡಿದ್ದಾರೆ.
