ಐಐಎಂ-ಕೋಲ್ಕತ್ತಾ ಹಾಸ್ಟೆಲ್ ಹಿಂಸೆ: ವಿದ್ಯಾರ್ಥಿನಿಗೆ ಡ್ರಗ್ಸ್ ಮಿಶ್ರಿತ ಪಾನೀಯ ನೀಡಿ ಅತ್ಯಾಚಾರ

ಕೋಲ್ಕತ್ತಾ: ಮತ್ತು ಬರಿಸುವ ಪಾನೀಯ ನೀಡಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ಇಂಡಿಯನ್ ಇನ್ಸ್ಟಿಟ್ಯೂಷನ್ ಆಫ್ ಮ್ಯಾನೇಜ್‌ಮೆಂಟ್ ಕಾಲೇಜಿನ ಹುಡುಗರ ಹಾಸ್ಟೆಲ್‌ನಲ್ಲಿ ನಡೆದಿದೆ.

ಹರಿದೇವ್‌ಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ. ಐಐಎಂ-ಕೋಲ್ಕತ್ತಾದ ಬಾಲಕರ ಹಾಸ್ಟೆಲ್ ಒಳಗೆ ಶುಕ್ರವಾರ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತನ್ನನ್ನು ಕೌನ್ಸೆಲಿಂಗ್ ಸೆಷನ್‌ಗಾಗಿ ಹಾಸ್ಟೆಲ್‌ಗೆ ಕರೆಸಲಾಗಿತ್ತು. ನಂತರ ಹಾಸ್ಟೆಲ್‌ನಲ್ಲಿ ಡ್ರಗ್ಸ್ ಬೆರೆಸಿದ ಪಾನೀಯ ಸೇವಿಸಿದ ನಂತರ ಪ್ರಜ್ಞಾಹೀನಳಾದೆ. ಪ್ರಜ್ಞೆ ಮರಳಿದ ನಂತರ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಅರಿವಾಗಿದೆ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆರೋಪಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ.
ಅತ್ಯಾಚಾರವೆಸಗಿದ ಆರೋಪಿ ವಿದ್ಯಾರ್ಥಿಯನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ
