ತೆಲುಗು ನಟ ವಿಜಯ್ ದೇವರಕೊಂಡ ಆಸ್ಪತ್ರೆಗೆ ದಾಖಲು

ತೆಲುಗು ನಟ ವಿಜಯ್ ದೇವರಕೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಡೆಂಗ್ಯೂ ಜ್ವರದಿಂದ ನಟ ಆಸ್ಪತ್ರೆಗೆ ದಾಖಲಾಗಿದ್ದು, ಜುಲೈ 20ರ ಒಳಗೆ ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ವರದಿಗಳು ತಿಳಿಸಿವೆ.
ಗೌತಮ್ ತಿನ್ನನುರಿ ನಿರ್ದೇಶನದ ನಟ ವಿಜಯ್ ದೇವರಕೊಂಡ ನಟನೆಯ ‘ಕಿಂಗ್‌ಡಮ್ʼ ಚಿತ್ರ ಇದೇ ಜುಲೈ 31 ರಂದು ಬಿಡುಗಡೆಯಾಗಲಿದೆ. 100 ಕೋಟಿ ಬಜೆಟ್‌ನಲ್ಲಿ ನಿರ್ಮಿಸಲಾದ ಈ ಸ್ಪೈ ಆಕ್ಷನ್ ಥ್ರಿಲ್ಲರ್ ಚಿತ್ರ ಭಾರೀ ನಿರೀಕ್ಷೆ ಮೂಡಿಸಿದೆ. ಆದ್ರೆ ಚಿತ್ರ ರಿಲೀಸ್‌ಗೂ ಮೊದಲೇ ನಟ ಈಗ ಆಸ್ಪತ್ರೆಗೆ ದಾಖಲಾಗಿದ್ದಾರೆ.