Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹಾರ್ನ್ ಹಾಕಿದ ಕಾರಣಕ್ಕೆ ಬಸ್ ಚಾಲಕ, ಪ್ರಯಾಣಿಕನ ಮೇಲೆ ಹಲ್ಲೆ – ಇಬ್ಬರು ಬೈಕ್ ಸವಾರರ ಬಂಧನ

Spread the love

ಉಪ್ಪಿನಂಗಡಿ: ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಕೆಎಸ್ಆರ್ ಟಿಸಿ ಬಸ್ ಡ್ರೈವರ್ ಮತ್ತು ಪ್ರಯಾಣಿಕ ಮೇಲೆ ಬೈಕ್ ಸವಾರರಿಬ್ಬರು ಹಲ್ಲೆ ಮಾಡಿದ ಘಟನೆ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿ ನತ್ತ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಚಾಲಕ ರಿಯಾಜ್ ಅಹಮ್ಮದ್ ಎಂಬವರು ಬಸ್ಸಿಗೆ ಅಡ್ಡವಾಗಿ ಸಂಚರಿಸುತ್ತಿದ್ದ ಬೈಕೊಂದಕ್ಕೆ ದಾರಿ ಬಿಟ್ಟು ಕೊಡುವ ಸಲುವಾಗಿ ಹಾರ್ನ್ ಹಾಕಿದ್ದರು. ಇದರಿಂದ ಕೆರಳಿದ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡಗಟ್ಟಿ ಬಸ್ಸಿನ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿ ಹಲ್ಲೆಯನ್ನು ತಡೆಯಲು ಬಂದ ಬಸ್ಸಿನ ಪ್ರಯಾಣಿಕ ಅವಿನಾಶ್ ಮೇಲೂ ಮುಗಿ ಬಿದ್ದ ಬೈಕ್ ಸವಾರರು ಹೆಲೈಟ್ ನಿಂದ ಅವಿನಾಶ್ ರವರ ತಲೆಗೆ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಈ ಬಗ್ಗೆ ಬಸ್ಸಿನ ಚಾಲಕ ಬೈಕ್ ಸವಾರರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.

ದೂರು ಸ್ವೀಕರಿಸಿದ ಉಪ್ಪಿನಂಗಡಿ ಠಾಣಾ ಪೊಲೀಸ್ ಸಬ್ ಇನ್‌ಸ್ಪೆಪೆಕ್ಟರ್ ಗುರುನಾಥ್ ಹಾದಿಮನಿ ಮಿಂಚಿನ ಕಾರ್ಯಾಚರಣೆ ನಡೆಸಿ ಒಂದು ಗಂಟೆಯೊಳಗೆ ಆರೋಪಿ ಬೈಕ್‌ ಸವಾರರಿಬ್ಬರನ್ನೂ ಪತ್ತೆ ಹಚ್ಚಿ ಬಂಧಿಸಿದರು. ಉಪ್ಪಿನಂಗಡಿ ಗ್ರಾಮದ ಮಠ ನಿವಾಸಿಗಳಾದ ಇಬ್ರಾಹಿಂ ಬ್ಯಾರಿ ಎಂಬವರ ಮಗ ಜುನೈದ್ (24) ಹಾಗೂ ಅಬ್ದುಲ್ ಲತೀಫ್ ಎಂಬವರ ಮಗ ಹಿಷಾಮ್ (18) ಎಂದು ಗುರುತಿಸಲಾಗಿದೆ. ಬಂಧಿತರ ವಿರುದ್ಧ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಸಾರ್ವಜನಿಕ ಶಾಂತಿ ಭಂಗ ಆರೋಪದಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *