Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಹಾರಾಷ್ಟ್ರದಲ್ಲಿ ಲಾಡ್ಕಿ ಬಹೀನ್ ಯೋಜನೆ: ‘ಮಹಾ’ ಹಗರಣ ಬಯಲು

Spread the love

ಬೆಂಗಳೂರು:ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್‌ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಲಾಡ್ಕಿ ಬಹೀನ್‌ ಯೋಜನೆ ಪ್ರಮುಖ ಪಾತ್ರವಹಿಸಿದೆ. ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದ ಮಹಿಳೆಯರಿಗೆ ನೀಡಿದ್ದ ಭರವಸೆಯಂತೆಯೇ ಮೈತ್ರಿ ಸರ್ಕಾರ ಯೋಜನೆ ಜಾರಿಗೆ ತಂದಿದೆ.

ಇನ್ನೂ 2.5 ಲಕ್ಷ ಕಡಿಮೆ ಆದಾಯದ 21 ರಿಂದ 65 ವರ್ಷ ವಯಸ್ಸಿನ ಮಹಿಳೆಯರ ಖಾತೆಗೆ ಮಾಸಿಕ 1,500 ರೂಪಾಯಿ ಜಮೆ ಮಾಡುವ ಯೋಜನೆಯಾಗಿದೆ. ಕಳೆದ 10 ತಿಂಗಳಲ್ಲಿ 14,298 ಪುರುಷರ ಖಾತೆಗೆ 21.44 ಕೋಟಿ ರೂಪಾಯಿ ಜಮೆಯಾಗಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಲೆಕ್ಕಪರಿಶೋಧನೆಯಿಂದ ತಿಳಿದುಬಂದಿದೆ.

ಈಗಾಗಲೇ 26.34 ಲಕ್ಷ ಫಲಾನುಭವಿಗಳು ಲಾಡ್ಕಿ ಬಹೀನ್‌ ಯೋಜನೆಯ ಲಾಭ ಪಡೆದಿದ್ದಾರೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ವರದಿಯ ಆಧಾರದಲ್ಲಿ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ತತ್ಕರೆ ತಿಳಿಸಿದ್ದಾರೆ. ಪರಿಶೀಲನೆಯ ಬಳಿಕ ಅರ್ಹರಾದ ಫಲಾನುಭವಿಗಳಿಗೆ ಮತ್ತೆ ಯೋಜನೆಯನ್ನು ಮುಂದುವರೆಸುತ್ತೇವೆ. ಆದರೆ ವಾಮ ಮಾರ್ಗದಲ್ಲಿ ಸರ್ಕಾರಕ್ಕೆ ವಂಚಿಸಿ ಯೋಜನೆಯ ಲಾಭ ಪಡೆದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ವಾರ್ನ್‌ ಮಾಡಿದ್ದಾರೆ.

ಸರ್ಕಾರ ನಿಗದಿ ಪಡಿಸಿರುವ ವಯಸ್ಸಿನ ಮಿತಿಯನ್ನೂ ಮೀರಿ 65 ವರ್ಷಕ್ಕಿಂತ ಮೇಲ್ಪಟ್ಟವರೂ ಕೂಡ ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಇನ್ನೂ ಕೆಲವು ಕುಟುಂಬಗಳಲ್ಲಿ ಇಬ್ಬರಿಗಿಂತ ಅಧಿಕ ಜನರು ಲಾಭ ಪಡೆದಿರುವುದು ಬೆಳಕಿಗೆ ಬಂದಿದೆ ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *