Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬ್ಯಾಂಕಾಕ್ ನಿಂದ ಗಾಂಜಾ ಸಾಗಾಟ: ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಮಹಿಳೆಯಿಂದ 14 ಕೋಟಿ ಮೌಲ್ಯದ ಗಾಂಜಾ ವಶಕ್ಕೆ

Spread the love

ಹೈದರಾಬಾದ್: ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಮಹಿಳಾ ಪ್ರಯಾಣಿಕರೊಬ್ಬರ ಲಗೇಜ್‌ನಿಂದ 14 ಕೋಟಿ ರೂ. ಮೌಲ್ಯದ 40 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಎನ್‌ಸಿಬಿ ವಶಪಡಿಸಿಕೊಂಡಿದ್ದು, ಮಹಿಳೆಯನ್ನು ಬಂಧಿಸಿದೆ.

ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿದ ಎನ್‌ಸಿಬಿ, ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸಿದ ಎನ್‌ಸಿಬಿ ಅಧಿಕಾರಿಗಳು ಮಹಿಳೆಯನ್ನು ತಡೆದು ಆಕೆಯ ಎರಡು ಚೆಕ್-ಇನ್ ಬ್ಯಾಗ್‌ಗಳಿಂದ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದೆ.

ಬ್ಯಾಂಕಾಕ್‌ನಿಂದ ನೇರವಾಗಿ ವಿವಿಧ ಭಾರತೀಯ ವಿಮಾನ ನಿಲ್ದಾಣಗಳಿಗೆ ಬರುವ ಪ್ರಯಾಣಿಕರಿಂದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿರುವ ಅನೇಕ ನಿದರ್ಶನಗಳು ಇರುವುದರಿಂದ ಮಹಿಳೆ ಯಾರಿಗೂ ಅನುಮಾನ ಬಾರದಂತೆ ಬ್ಯಾಂಕಾಕ್‌ನಿಂದ ಕಳ್ಳಸಾಗಣೆ ಮಾಡಿ ದುಬೈ ಮೂಲಕ ಭಾರತಕ್ಕೆ ಬಂದಿದ್ದಾಳೆ ಎಂದು ತನಿಖೆಯಿಂದ ತಿಳಿದುಬಂದಿದೆ. ಥೈಲ್ಯಾಂಡ್ ಮತ್ತು ಭಾರತದಲ್ಲಿ ಮಹಿಳೆಗಿರುವ ಲಿಂಕ್ ಅನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎನ್‌ಸಿಬಿ ಮಾಹಿತಿ ನೀಡಿದೆ.


Spread the love
Share:

administrator

Leave a Reply

Your email address will not be published. Required fields are marked *