ಚಿಕ್ಕಮಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಕ್ಯಾಂಟರ್ – ಕೆಎಸ್ಆರ್ಟಿಸಿ ಬಸ್ ಡಿಕ್ಕಿ, ಇಬ್ಬರು ಸಾವು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕೆಎಸ್ಆರ್ಟಿಸಿ ಬಸ್ ಕ್ಯಾಂಟರ್ ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ತರೀಕೆರೆ ತಾಲೂಕಿನ ಶಿವಪುರ ಗೇಟ್ ಬಳಿ ಘಟನೆ ನಡೆದಿದ್ದು, ಅಪಘಾತ ಸಂಭವಿಸಿದೆ. ನಿದ್ದೆಯ ಮಂಪರಿನಲ್ಲಿ ಕ್ಯಾಂಟರ್ ಚಾಲಕ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ. ಕ್ಯಾoಟರ್ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಹುಬ್ಬಳ್ಳಿಯಿಂದ ಕ್ಯಾಂಟರ್ ವಾಹನ ಮೈಸೂರಿಗೆ ತೆರುಳುತ್ತಿತ್ತು ಕಡೂರಿನಿಂದ ಕೆಎಸ್ಆರ್ಟಿಸಿ ಬಸ್ ಹೂವಿನಹಡಗಲಿಗೆ ತೆರಳುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದ್ದು, ಮೃತಪಟ್ಟ ಇಬ್ಬರನ್ನು ಹುಬ್ಬಳ್ಳಿ ಮೂಲದ ಚಾಲಕ ಕ್ಲೀನರ್ ಎಂದು ಗುರುತಿಸಲಾಗಿದೆ.
ಬೀರೂರು ಪೊಲೀಸ್ ಠಾಣೆಯಲ್ಲಿ ಅಪಘಾತ ಕುರಿತು ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.