ಸಿಎಇ ಚಾಲಕ ನೇಣು ಬಿಗಿದುಕೊಂಡ ಪ್ರಕರಣ:ಡೆತ್‌ನೋಟ್‌ನಲ್ಲಿ ಏನಿದೆ?

ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತಿ ಸಿಎಇ ಅವರ ಕಾರು ಚಾಲಕ ಬಾಬು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್‌ನೋಟ್‌ಅನ್ನು ಮಹಿಳಾ ಸಿಬ್ಬಂದಿಗೆ ಕಳುಹಿಸಿದ್ದರು.

ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಯ ಗುತ್ತಿಗೆ ನೌಕರ ಕಾರು ಚಾಲಕ ಬಾಬು ಜಿಲ್ಲಾಡಳಿತ ಭವನದ ಆವರಣದಲ್ಲಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ್ ಸಭಾಂಗಣದ ಪಕ್ಕದ ಮರದಡಿಯಲ್ಲೇ ಸರ್ಕಾರಿ ಕಾರು ನಿಲ್ಲಿಸಿ ಕಾರಿನ ಮೇಲೆ ಹತ್ತಿ ಹೊಂಗೆ ಮರಕ್ಕೆ ನೇಣಿಗೆ ಶರಣಾಗಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಚೌಕ್ಸಿ ಸೇರಿದಂತೆ ಗ್ರಾಮಾಂತರ ಪೊಲೀಸರು ತನಿಖೆ ನಡೆಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಕಾರು ಚಾಲಕನ ಸರ್ಕಾರಿ ಕಾರಿನಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ನನ್ನ ಸಾವಿಗೆ ಡಾ ಕೆ ಸುಧಾಕರ್ ಕಾರಣ ಎಂದು ಉಲ್ಲೇಖಿಸಿದ್ದಾರೆ.
ಘಟನೆ ಸಂಬಂಧ ತನಿಖೆಗಿಳಿದ ಪೊಲೀಸರು ಮೃತದೇಹವನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದು ಇತ್ತ ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ನಾಗೇಶ್‌ಗಾಗಿ ಹುಡುಕಾಟ ನಡೆಸಿದ್ದಾರೆ.