ಹಾಸನದಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ

ಹಾಸನ: ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದ್ದು, ವಿಡಿಯೋ ಮಾಡಿ ಸಂತ್ರಸ್ತೆಯ ಸಹೋದರನಿಗೆ ಕಳಿಸಿರುವಂತಹ ಘಟನೆ ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಘಟನೆ ಸಂಬಂಧ ಸಂತ್ರಸ್ತೆ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ಮೂವರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ದುರುಳರು ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಆ ಪೈಶಾಚಿಕ ಕೃತ್ಯದ ವಿಡಿಯೋವನ್ನು ಸಂತ್ರಸ್ತೆಯ ಸಹೋದರನಿಗೆ ಕಳುಹಿಸಿ ಬಳಿಕ ಡಿಲೀಟ್ ಮಾಡಿದ್ದಾರೆ. ಇತ್ತ ವಿಡಿಯೋ ನೋಡಿದ ಸಂತ್ರಸ್ತೆಯ ಕುಟುಂಬ ಬೆಚ್ಚಿಬಿದ್ದಿದೆ.
ಸದ್ಯ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ಸಹೋದರ ಪೊಲೀಸರಿಗೆ ದೂರು ಹಿನ್ನಲೆ ಅಬ್ದುಲ್ ಅಫ್ತಾಬ್, ರಾಜಿಕ್ ಪಾಷಾ ಮತ್ತು ಉಮ್ರಾನ್ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಹುಡುಕಾಟದ ಜೊತೆಗೆ ಅತ್ಯಾಚಾರ ನಡೆದ ಸ್ಥಳ, ಯಾವಾಗ ನಡೆದಿದೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
