Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಸ್ಕಾಂ ಸ್ಮಾರ್ಟ್ ಮೀಟರ್ ರಿಟ್ ಅರ್ಜಿ ಹೈಕೋರ್ಟ್‌ನಲ್ಲಿ ವಜಾ

Spread the love

ಬೆಂಗಳೂರು: ಬೆಸ್ಕಾಂನ ಸ್ಮಾರ್ಟ್​ ಮೀಟರ್​​ ಕಡ್ಡಾಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್  ಮಹತ್ವದ ವಾದ ಪ್ರತಿವಾದ ನಡೆದಿದ್ದು, ಇದೀಘ ಅಂತಿಮವಾಗಿ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಬೆಸ್ಕಾಂ ಸ್ಮಾರ್ಟ್ ಮೀಟರ್ ಕಡ್ಡಾಯ ಪ್ರಶ್ನಿಸಿದ್ದ ರಿಟ್ ಅರ್ಜಿಯನ್ನು ಹಲವು ದಿನಗಳಿಂದ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಂತಿಮವಾಗಿ ವಾದ ಪ್ರತಿವಾದ ಆಲಿಸಿ ಇದೀಗ ಅರ್ಜಿಯನ್ನು ವಜಾಗೊಳಿಸಿದೆ.​ ಹಳೆಯ ಮೀಟರ್ ಬದಲಿಸುವುದಿಲ್ಲವೆಂದು ಎಜಿ ಹೇಳಿಕೆ ನೀಡಿದ್ದಾರೆ. ಅಲ್ಲದೇ ವಿಭಾಗೀಯ ಪೀಠದಲ್ಲಿ ಈ ವಿಚಾರಕ್ಕೆ ಪಿಐಎಲ್ ದಾಖಲಾಗಿದೆ ಎಂದು ಹೇಳಿ ಜಯಲಕ್ಷ್ಮಿ , ಪಿ.ಎಂ.ಹರೀಶ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಹಳೆಯ ಮೀಟರ್ ಬದಲಿಸುವುದಿಲ್ಲವೆಂದು ಇಲ್ಲವೆಂದು ಎಜಿ ಹೇಳಿಕೆ ನೀಡಿದ್ದಾರೆ. ಅಲ್ಲದೇ ವಿಭಾಗೀಯ ಪೀಠದಲ್ಲಿ ಈ ವಿಚಾರಕ್ಕೆ ಪಿಐಎಲ್ ದಾಖಲಾಗಿದೆ. ಪಿಐಎಲ್ ನಲ್ಲಿ ರಿಟ್ ಅರ್ಜಿಯ ಅಂಶಗಳನ್ನು ಯಥಾವತ್ತಾಗಿ ಉಲ್ಲೇಖಿಸಲಾಗಿದೆ. ಹೀಗಾಗಿ ಏಕಸದಸ್ಯ ಪೀಠದಲ್ಲಿ ಈ ಬಗ್ಗೆ ತೀರ್ಮಾನಿಸುವುದು ಸೂಕ್ತವಲ್ಲ ಎಂದು ಜಯಲಕ್ಷ್ಮಿ ಹಾಗೂ ಪಿ.ಎಂ.ಹರೀಶ್ ಸಲ್ಲಿಸಿದ ರಿಟ್ ಅರ್ಜಿ ವಜಾಗೊಳಿಸಿದೆ.

ದೊಡ್ಡಬಳ್ಳಾಪುರದ ಟಿಬಿ ನಾರಾಯಣಪ್ಪ ಲೇಔಟ್​ ನಿವಾಸ ಎಂ ಜಯಲಕ್ಷ್ಮೀ ಅವರು ಹೊಸದಾಗಿ ನಿರ್ಮಿಸಿರುವ ತಮ್ಮ ಮನೆಗೆ ಸಿಂಗಲ್ ಫೇಸ್​ ನಿಂದ ತ್ರೀ ಫೇಸ್​ ಗೆ ಮೀಟರ್ ಪರಿವರ್ತನೆ ಮಾಡಿಕೊಳ್ಳುವುದಕ್ಕೆ ಮನವಿ ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಬೆಸ್ಕಾಂ ಅಧಿಕಾರಿಗಳು, ಸ್ಮಾರ್ಟ್​ ಮೀರ್ಟ್ ಅವಳವಸಿಕೊಳ್ಳಬೇಕು ಎಂದು ತಾಕೀತು ಮಾಡಿ ಪತ್ರವೊಂದನ್ನು ನೀಡಿದ್ದರು. ಈ ಸಂಬಂಧ ದೊಡ್ಡಬಳ್ಳಾಪುರ ನಗರ ಉಪವಿಭಾಗ ಸಹಾಯ ಕಾರ್ಯನಿರ್ವಾಹಕ ಇಂಜಿನಿಯರ್ ನೀಡಿದ್ದ ಪತ್ರವನ್ನು ಪ್ರಶ್ನಿಸಿ ವಿಯಲಕ್ಷ್ಮೀ ಹೈಕೋರ್ಟ್​​ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇದನ್ನು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸ್ಮಾರ್ಟ್ ಮೀಟರ್ ಬಗ್ಗೆ ಸರ್ಕಾರಕ್ಕೆ ಚಾಟಿ ಬೀಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಸ್ಮಾರ್ಟ್ ಮೀಟರ್ ಅಳವಡಿಕೆಗೆ ಮಧ್ಯಂತರ ತಡೆ ನೀಡಿ, ಆಕ್ಷೇಪಣೆ ಸಲ್ಲಿಸಲು ಬೆಸ್ಕಾಂ ವಕೀಲರಿಗೆ ನೋಟಿಸ್ ಜಾರಿ ಮಾಡಿತ್ತು. ಸ್ಮಾರ್ಟ್ ಮೀಟರ್ ಕಡ್ಡಾಯ ಉಚಿತ ಭಾಗ್ಯಗಳನ್ನು ಕೊಟ್ಟಿರುವ ಪರಿಣಾಮಾನಾ? ನಿಮಗೆ ಉಚಿತ ವಿದ್ಯುತ್ ಕೇಳಿದವರು ಯಾರು? ಬಡವರು ಎಲ್ಲಿಗೆ ಹೋಗಬೇಕು ಎಂದು ಸರ್ಕಾರಿ ಪರ ವಕೀಲರನ್ನು ಜಡ್ಜ್ ತರಾಟೆಗೆ ತೆಗೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.


Spread the love
Share:

administrator

Leave a Reply

Your email address will not be published. Required fields are marked *