ಅಪ್ರಾಪ್ತನಿಗೆ ಜೀವಾವಧಿ ಶಿಕ್ಷೆ: ಸೆಷನ್ಸ್ ನ್ಯಾಯಾಲಯ ಆದೇಶ ರದ್ದು-ಏನಿದು ಪ್ರಕರಣ?

ಮಹಾರಾಷ್ಟ್ರದ ಯಾವತ್ಮಲ್ ಜಿಲ್ಲೆಯಿಂದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಒಂಬತ್ತು ವರ್ಷದ ಬಾಲಕನೊಬ್ಬ ತನ್ನ 8 ವರ್ಷದ ಸಹಪಾಠಿಯ ಮೇಲೆ ಶಾಲೆಯ ಶೌಚಾಲಯದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ನೀಚ ಕೃತ್ಯಕ್ಕೆ ಸಹಾಯ ಮಾಡಿದವರು ಬೇರಾರೂ ಅಲ್ಲ, ಅದೇ ತರಗತಿಯಲ್ಲಿ ಓದುತ್ತಿರುವ ಮತ್ತೊಬ್ಬ ವಿದ್ಯಾರ್ಥಿನಿ.

ಇದೀಗ ಆರೋಪಿ ಅಪ್ರಾಪ್ತ ಬಾಲಕ ಮತ್ತು ಅಪರಾಧಕ್ಕೆ ಸಹಾಯ ಮಾಡಿದ 9 ವರ್ಷದ ಬಾಲಕಿಯನ್ನು ವಶಕ್ಕೆ ಪಡೆದು ರಿಮ್ಯಾಂಡ್ ಹೋಂಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ಎಂಟು ವರ್ಷದ ಸಂತ್ರಸ್ತೆ ಮತ್ತು ಇಬ್ಬರು ಆರೋಪಿಗಳು ಯವತ್ಮಾಲ್ ಜಿಲ್ಲೆಯ ಬಾಬುಲ್ಗಾಂವ್ ಪಟ್ಟಣದ ಜಿಲ್ಲಾ ಪರಿಷತ್ ಶಾಲೆಯಲ್ಲಿ 3 ನೇ ತರಗತಿಯಲ್ಲಿ ಓದುತ್ತಿದ್ದಾರೆ. ಘಟನೆ ಆಗಸ್ಟ್ 1 ರಂದು ಶಾಲೆಯಲ್ಲಿ ನಡೆದಿದೆ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಸಂತ್ರಸ್ತೆ ತನ್ನ ಖಾಸಗಿ ಭಾಗಗಳಲ್ಲಿ ನೋವು ಅನುಭವಿಸುತ್ತಿರುವುದಾಗಿ ದುಃಖ ತೋಡಿಕೊಂಡಿದ್ದಾಳೆ. ನಂತರ ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷೆಯ ನಂತರ, ಬಾಲಕಿಯ ಖಾಸಗಿ ಭಾಗಗಳಲ್ಲಿ ಗಾಯದ ಗುರುತುಗಳಿವೆ ಎಂದು ವೈದ್ಯರು ಹೇಳಿದ್ದಾರೆ. ತಾಯಿ ಈ ಬಗ್ಗೆ ಸಂತ್ರಸ್ತೆಯನ್ನು ಕೇಳಿದಾಗ ಅವಳು ಎಲ್ಲವನ್ನೂ ಹೇಳಿದ್ದಾಳೆ. ನಂತರ ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.
ಆಗಸ್ಟ್ 9 ರಂದು ಸಂತ್ರಸ್ತೆಯ ತಾಯಿ ಅಪ್ರಾಪ್ತ ಬಾಲಕ ಮತ್ತು ಬಾಲಕಿಯ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅದರ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆ (ಬಿಎನ್‌ಎಸ್) ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳಿಬ್ಬರನ್ನೂ ವಶಕ್ಕೆ ಪಡೆಯಲಾಗಿದೆ.
ಬಾಬುಲ್ಗಾಂವ್‌ನಲ್ಲಿ 8 ವರ್ಷದ ಬಾಲಕಿಯ ಮೇಲೆ 9 ವರ್ಷದ ಬಾಲಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ದೂರು ಪೊಲೀಸರಿಗೆ ಬಂದಿದೆ ಎಂದು ಯವತ್ಮಲ್ ಎಸ್‌ಪಿ ಕುಮಾರ್ ಚಿಂತಾ ತಿಳಿಸಿದ್ದಾರೆ. ಆರೋಪಿ ಅಪ್ರಾಪ್ತ ಬಾಲಕ ಮತ್ತು ಅಪರಾಧಕ್ಕೆ ಸಹಾಯ ಮಾಡಿದ್ದಕ್ಕಾಗಿ ಇನ್ನೊಬ್ಬ ಬಾಲಕಿಯನ್ನು ಬಂಧಿಸಲಾಗಿದೆ. ಆರೋಪಿಗಳಿಬ್ಬರನ್ನೂ ರಿಮ್ಯಾಂಡ್ ಹೋಂಗೆ ಕಳುಹಿಸಲಾಗಿದ್ದು, ಪ್ರಕರಣ ತನಿಖೆಯಲ್ಲಿದೆ.
ಅಪ್ರಾಪ್ತ ಬಾಲಕಿಯ ಮೇಲೆ ಐವರಿಂದ ಅತ್ಯಾಚಾರ ಇದಕ್ಕೂ ಮೊದಲು, ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಮೂರು ತಿಂಗಳ ಅವಧಿಯಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಹಲವಾರು ಬಾರಿ ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು 25 ವರ್ಷದ ಯುವಕನನ್ನು ಬಂಧಿಸಿದ್ದು, ನಾಲ್ವರು ಅಪ್ರಾಪ್ತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕೇಂದ್ರ ಮುಂಬೈನ ಪರೇಲ್ ಪ್ರದೇಶದ ಕಲಾಚೌಕಿ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ಕುಟುಂಬವು ಸಾಮೂಹಿಕ ಅತ್ಯಾ*ಚಾರದ ದೂರು ದಾಖಲಿಸಿದೆ. ಆರೋಪಿಗಳಲ್ಲಿ ಒಬ್ಬನ ಗೆಳತಿ ಭಾನುವಾರ ಮುಂಜಾನೆ ಸಂತ್ರಸ್ತೆಯ ಮನೆಗೆ ತಲುಪಿ ಆರೋಪಿಯೊಂದಿಗಿನ ತನ್ನ ಸಂಬಂಧದ ಬಗ್ಗೆ ಹೇಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಗೆಳೆಯನೊಂದಿಗಿನ ಸಂಬಂಧದ ಬಗ್ಗೆ ಸಂತ್ರಸ್ತೆಯೊಂದಿಗೆ ಅವಳು ಜಗಳವಾಡಿದ್ದಾಳೆ. ನಂತರ ಅಪ್ರಾಪ್ತ ಬಾಲಕಿಯ ಕುಟುಂಬಕ್ಕೆ ಈ ಘೋರ ಘಟನೆಯ ಬಗ್ಗೆ ತಿಳಿದುಬಂದಿದೆ. ಸಂತ್ರಸ್ತೆಯ ಪೋಷಕರು ತಮ್ಮ ಮಗಳ ಮೊಬೈಲ್ ಪರಿಶೀಲಿಸಿದಾಗ ಆರೋಪಿಯೊಂದಿಗೆ ಅಶ್ಲೀಲ ವಿಡಿಯೋಗಳು ಮತ್ತು ಚಾಟ್‌ಗಳು ಕಂಡುಬಂದಿವೆ. ಇದಾದ ನಂತರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ, ಪೊಲೀಸರು ಎಲ್ಲಾ ಐದು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ (ಬಿಎನ್‌ಎಸ್) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪೊಲೀಸರು 25 ವರ್ಷದ ಆರೋಪಿ ಮತ್ತು ಇತರ ನಾಲ್ವರು ಹದಿಹರೆಯದವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸಂತ್ರಸ್ತೆಯ ಅಶ್ಲೀಲ ವಿಡಿಯೋ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ವಿಡಿಯೋ ತೋರಿಸಿ ಅಪ್ರಾಪ್ತ ಬಾಲಕಿಯನ್ನು ಬ್ಲ್ಯಾಕ್‌ಮೇಲ್ ಮಾಡಲಾಗಿತ್ತು ಮತ್ತು ಆರೋಪಿಗಳು ಆಕೆಯ ಮೇಲೆ ಪದೇ ಪದೇ ಅತ್ಯಾ*ಚಾರ ಎಸಗಿದ್ದರು.
