ಸಂವಿಧಾನದ ಪ್ರಜ್ಞೆ ಇಲ್ಲದಿದ್ದರೆ ಹೊಸ ಪೀಳಿಗೆಗೆ ಅನಾಹುತ: ಸಚಿವ ಚೆಲುವರಾಯಸ್ವಾಮಿ
ಸಂವಿಧಾನದ ಪ್ರಜ್ಞೆ ಹೆಚ್ಚಿಸಿಕೊಳ್ಳದಿದ್ದರೆ ಹೊಸ ಪೀಳಿಗೆಗೆ ಅನಾಹುತ ಕಾದಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಎಚ್ಚರಿಸಿದ್ದಾರೆ. ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ನಡೆದ 75ನೇ ಸಂವಿಧಾನ ಅಮೃತ ಮಹೋತ್ಸವದಲ್ಲಿ ಮಾತನಾಡಿದ ಅವರು, ಸಂವಿಧಾನ ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.


ಈ ದೇಶದ ಸಂವಿಧಾನ ಬಹಳ ಮುಖ್ಯ ಬಹು:ಶ ಎಲ್ಲಾ ಗ್ರಂಥಗಳಿಗಿಂತಲೂ ಶ್ರೇಷ್ಠವಾಗಿದೆ ಎಂದು ಪ್ರಜ್ಞಾವಂತರು ಹೇಳಿದ್ದಾರೆ ಉಳಿಸಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ. ಪ್ರತಿಯೊಬ್ಬ ನಾಗರಿಕರಿಗೂ ಶಕ್ತಿ ತುಂಬುವ ಗ್ರಂಥ ಸಂವಿಧಾನವಾಗಿದೆ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರನ್ನು ಕರಡು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ ನಂತರ ಸಂವಿಧಾನ ದಲಿತರಿಗೆ ಮಾತ್ರ ಸಂಬಂಧಪಟ್ಟದ್ದು ಎಂದು ತಿಳಿದುಕೊಳ್ಳುವುದು ತಪ್ಪಾಗುತ್ತದೆ ಎಂದರು.
ಅಂದಿನ ಕಾಲದಲ್ಲಿ ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ಸ್ವಾತಂತ್ರ್ಯ ಭಾರತವಾಯಿತು, ಸುಗಮ ಆಡಳಿತ ವ್ಯವಸ್ಥೆಗೆ ಅನುಕೂಲವಾಗುವ ರೀತಿಯ ಸಂವಿಧಾನ ರಚನೆಗಾಗಿ ಜ್ಞಾನಿಗಳು ಬುದ್ಧಿವಂತರು ಮತ್ತು ದೇಶದ ಸಮಸ್ಯೆಗಳನ್ನು ಅರಿತ ಅಂಬೇಡ್ಕರ್ ಅವರ ನೇತೃತ್ವದಲ್ಲಿ ತಂಡ ರಚಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯ ಸಂವಿಧಾನವನ್ನು ರಚಿಸಿ ದೇಶಕ್ಕೆ ಸಮರ್ಪಿಸಲು ಪ್ರಧಾನ ಮಂತ್ರಿ ನೆಹರು ಮತ್ತು ರಾಜೇಂದ್ರ ಪ್ರಸಾದ್ ಅವರಿಗೆ ಅರ್ಪಿಸಿದರು ಎಂದು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಮೈಸೂರಿನ ಉರಿಲಿಂಗ ಪೆದ್ದಿ ಮಠ ಪೀಠ್ಯಾಧ್ಯಕ್ಷ ಜ್ಞಾನ ಪ್ರಕಾಶ್ ಸ್ವಾಮೀಜಿ, ಕರ್ನಾಟಕ ಸ್ವಾಭಿಮಾನಿ ಸಮ ಸಮಾಜ ರಾಜ್ಯಾಧ್ಯಕ್ಷ ಎಚ್ ಎನ್. ನರಸಿಂಹಮೂರ್ತಿ, ಸಂಸ್ಥಾಪಕ ಅಧ್ಯಕ್ಷ ಡಾ. ಕುಮಾರಸ್ವಾಮಿ ಸಾಕ್ಯ, ಶಾಸಕ ರವಿಕುಮಾರ್ ಗೌಡ ಗಣಿಗ, ಶಾಸಕ ದಿನೇಶ್ ಗೂಳಿಗೌಡ ,ಕಾಂಗ್ರೆಸ್ ನಾಯಕ ಸ್ಟಾರ್ ಚಂದ್ರು, ಮೂಡ ಅಧ್ಯಕ್ಷ ನಹಿಮ್, ಮಾಜಿ ಶಾಸಕ ಡಾಕ್ಟರ್ ಕೆ ಅನ್ನದಾನಿ, ನಾವು ದ್ರಾವಿಡ ಕನ್ನಡಿಗರು ಚಳುವಳಿಯ ಅಭಿ ಒಕ್ಕಲಿಗ, ಖ್ಯಾತ ಲೇಖಕ ಎಸ್ ಸಿದ್ದಯ್ಯ, ಅಬಕಾರಿ ಅಧಿಕ ತಿರುಮಲಾಪುರ ನಾರಾಯಣ, ಎಲ್ ಸಂದೇಶ್, ಲಕ್ಷ್ಮಣ ಚೀರನಹಳ್ಳಿ ಸೇರಿದಂತೆ ಹಲವರು ಇದ್ದರು.