Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಉತ್ತರ ಕಾಶ್ಮೀರದಲ್ಲಿ ಮೇಘಸ್ಫೋಟ :5 ದಿನದಲ್ಲಿ 3ನೇ ದುರಂತ -ಪ್ರವಾಹದ ಆತಂಕ

Spread the love

ಶ್ರೀನಗರ: ಕಿಶ್ತ್ವಾರ, ಕಥುವಾ ಬಳಿಕ ಈಗ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಮೇಘಸ್ಫೋಟದಿಂದ ಹಠಾತ್‌ ಪ್ರವಾಹ ಸಂಭವಿಸಿದೆ. 5 ದಿನಗಳಲ್ಲಿ ಇದು 3ನೇ ದುರಂತವಾಗಿದೆ.

ಉತ್ತರ ಕಾಶ್ಮೀರದ ಕುಪ್ವಾರಾದ ವಾರ್ನೋ ಅರಣ್ಯ ಪ್ರದೇಶದಲ್ಲಿ ಮೇಘಸ್ಫೋಟದಿಂದ ಹಠಾತ್‌ ಪ್ರವಾಹ ಸಂಭವಿಸಿದೆ. ಅದೃಷ್ಟವಶಾತ್‌ ಈವರೆಗೆ ಯಾವುದೇ ಪ್ರಾಣಹಾನಿ, ಆಸ್ತಿಪಾಸ್ತಿ ಹಾನಿಯಾಗಲಿ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ

ಇನ್ನೂ ಒಂದು ದಿನದ ಹಿಂದಷ್ಟೇ ಕಥುವಾ ಜಿಲ್ಲೆಯ ಜಂಗ್ಲೋಟ್‌ ಹಳ್ಳಿಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಐವರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. 9ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಇದಕ್ಕೂ ಮುನ್ನ ಕಳೆದ ಗುರುವಾರ ಜಮ್ಮು ಕಾಶ್ಮೀರದ ಕಿಶ್ತ್ವಾರ ಜಿಲ್ಲೆಯ ಚಶೋತಿ ಗ್ರಾಮದಲ್ಲಿ ಉಂಟಾದ ಮೇಘಸ್ಫೋಟದಿಂದ 65 ಮಂದಿ ಸಾವನ್ನಪ್ಪಿದ್ದು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸದ್ಯ ನಾಪತ್ತೆಯಾದವರಿಗಾಗಿ ಕಳೆದ 5 ದಿನಗಳಿಂದಲೂ ಇಲ್ಲಿ ಶೋಧಕಾರ್ಯ ನಡೆಯುತ್ತಿದೆ. ಈ ಹೊತ್ತಿನಲ್ಲೇ ಕುಪ್ವಾರಾದಲ್ಲಿ ಮೇಘಸ್ಫೋಟ ಸಂಭವಿಸಿದೆ.

 


Spread the love
Share:

administrator

Leave a Reply

Your email address will not be published. Required fields are marked *