Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೀದಿ ನಾಯಿಯನ್ನು ರಕ್ಷಿಸಲು ಹೋಗಿ ದ್ವಿಚಕ್ರ ವಾಹನ ಅಪಘಾತ ಸಬ್ ಇನ್ಸ್‌ಪೆಕ್ಟರ್ ಸಾವು

Spread the love

ಸೋಮವಾರ (ಆ.18) ರಿಚಾ ಅವರು ಕರ್ತವ್ಯ ಮುಗಿಸಿ ಮಧ್ಯಾಹ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭ ಏಕಾಏಕಿ ಬೀದಿ ನಾಯಿಯೊಂದು ರಸ್ತೆಗೆ ಅಡ್ಡ ಬಂದಿದೆ ಈ ವೇಳೆ ನಾಯಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಒಮ್ಮೆಲೇ ಬ್ರೇಕ್ ಹಾಕಿದ್ದಾರೆ ಪರಿಣಾಮ ವಾಹನ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದೆ ಇದರೊಂದಿಗೆ ರಿಚಾ ಕೂಡಾ ರಸ್ತೆಗೆ ಬಿದ್ದಿದ್ದಾರೆ ಅದೇ ಸಮಯದಲ್ಲಿ ವೇಗವಾಗಿ ಬಂದ ಕಾರು ರಿಚಾ ಅವರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಕಾನ್ಪುರ ನಿವಾಸಿಯಾಗಿರುವ ರಿಚಾ ಅವರು 2023 ರಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಗಾಜಿಯಾಬಾದ್ ನಲ್ಲಿರುವ ಶಾಸ್ತ್ರಿ ನಗರ ಹೊರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಿಚಾ ಯುಪಿಎಸ್‌ಸಿ ಪರೀಕ್ಷೆಗೂ ತಯಾರಿ ನಡೆಸುತ್ತಿದ್ದರು ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪೋಷಕರು ಹೇಳಿದ್ದೇನು?
ಇನ್ನು ರಸ್ತೆ ಅಪಘಾತದಲ್ಲಿ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ, ಅಲ್ಲದೆ ಪೋಷಕರು ಹೇಳಿದಂತೆ ಮುಂದಿನ ವರ್ಷ ಆಕೆಗೆ ಮದುವೆ ಮಾಡುವ ಆಲೋಚನೆಯಲ್ಲಿ ಇದ್ದೆವು ಆದರೆ ಅದೆಲ್ಲವೂ ನುಚ್ಚುನೂರಾಯಿತು ಎಂದು ಪೋಷಕರು ಕಣ್ಣೀರು ಹಾಕಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *