ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ಶಿಲ್ಪಾ ಆತ್ಮಹತ್ಯೆ: ಪತಿ ಪ್ರವೀಣ್ ಬಂಧನ

ಬೆಂಗಳೂರು: ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಎಸ್‍ಜಿ.ಪಾಳ್ಯದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಟೆಕ್ಕಿಯನ್ನು ಶಿಲ್ಪಾ ಎಂದು ಗುರುತಿಸಲಾಗಿದೆ. ಶಿಲ್ಪಾ, ಪ್ರವೀಣ್ ಎಂಬಾತನನ್ನು 2 ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಪ್ರವೀಣ್ ವಿರುದ್ಧ ಮಹಿಳೆಯ ಕುಟುಂಬಸ್ಥರು, ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದಾನೆ ಎಂದು ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಸ್‍ಜಿ ಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪ್ರವೀಣ್‍ನನ್ನು ಬಂಧಿಸಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ.