Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನರ್ಸಿಂಗ್ ವಿದ್ಯಾರ್ಥಿನಿಯ ದುರ್ಮರಣ! ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Spread the love

ರಾಮನಗರ : ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದ್ದು. ಮೃತ ವಿದ್ಯಾರ್ಥಿಯನ್ನು 19 ವರ್ಷದ ಅನಾಮಿಕ ಎಂದು ಗುರುತಿಸಲಾಗಿದೆ.

ಅನಾಮಿಕ ಹಾರೋಹಳ್ಳಿ ತಾಲ್ಲೂಕಿನಲ್ಲಿರುವ ದಯಾನಂದ ಸಾಗರ್​ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್ಸಿ ನರ್ಸಿಂಗ್​ ಓದುತ್ತಿದ್ದಳು. ಇದೇ ಕಾಲೇಜಿನ ಹಾಸ್ಟೆಲ್​ನಲ್ಲಿ ಅನಾಮಿಕ ವಾಸ್ತವ್ಯ ಹೂಡಿದ್ದಳು. ಆದರೆ ನಿನ್ನೆ ರಾತ್ರಿ 8 ಗಂಟೆ ವೇಳೆಗೆ ರೂಂನಲ್ಲಿ ಅನಾಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.

ರಾತ್ರಿ 8 ಗಂಟೆಯಾದರು ಅನಾಮಿಕ ಊಟಕ್ಕೆ ಬರದ ಹಿನ್ನಲೆ ಅನುಮಾನಗೊಂಡ ಇತರ ವಿದ್ಯಾರ್ಥಿನಿಯರು ರೂಂ ಬಾಗಿಲು ಬಡಿದಿದ್ದಾರೆ. ಆದರೆ ಅನಾಮಿಕ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನಲೆ ಮತ್ತೊಂದು ಕೀ ಬಳಸಿ ಬಾಗಿಲು ಓಪನ್​ ಮಾಡದಾಗ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಹಾರೋಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *